nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್
    ತುರುವೇಕೆರೆ January 6, 2026

    ಬಂದಕುಂಟೆ ನಾಗರಾಜು: ಅಂಬೇಡ್ಕರ್ ಹೋರಾಟದ ರಥಕ್ಕೆ ತುಮಕೂರಿನಲ್ಲಿ ಸಾರಥ್ಯ ನೀಡಿದ ಮಹಾನ್ ಚೇತನ: ದಂಡಿನ ಶಿವರ ಕುಮಾರ್

    By adminJanuary 6, 2026No Comments2 Mins Read
    bandakunte nagaraju

    ತುರುವೇಕೆರೆ: “ತುಮಕೂರು ಜಿಲ್ಲೆಯಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೋರಾಟದ ರಥವನ್ನು ಮುನ್ನಡೆಸಿದ ಸಾಲಿನಲ್ಲಿ ಬಂದಕುಂಟೆ ನಾಗರಾಜುರವರು ಅಗ್ರಸ್ಥಾನದಲ್ಲಿದ್ದಾರೆ,” ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ದಂಡಿನ ಶಿವರ ಕುಮಾರ್ ನುಡಿದರು.

    ತುರುವೇಕೆರೆ ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ), ಆದಿ ಜಾಂಬವ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ದಲಿತ ಹೋರಾಟಗಾರ ಮತ್ತು ಶಿಕ್ಷಕ ಬಂದಕುಂಟೆ ನಾಗರಾಜು ಅವರಿಗೆ ಆಯೋಜಿಸಲಾಗಿದ್ದ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

    ಬಂದಕುಂಟೆ ನಾಗರಾಜಯ್ಯನವರು ಕೇವಲ ಹೋರಾಟಗಾರರಲ್ಲದೆ, ಒಬ್ಬ ಉತ್ತಮ ಲೇಖಕರೂ ಆಗಿದ್ದರು. ತಮ್ಮ ಬದುಕಿನ ಅನುಭವಗಳನ್ನು ‘ಬಿತ್ತನೆ ಬೀಜ’ ಎಂಬ ಕೃತಿಯ ಮೂಲಕ ದಾಖಲಿಸಿ ದಲಿತ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. 70ರ ದಶಕದಲ್ಲಿ ತಳ ಸಮುದಾಯಗಳು ದಬ್ಬಾಳಿಕೆಗೆ ಒಳಗಾಗಿದ್ದಾಗ, ಪ್ರೊ. ಬಿ. ಕೃಷ್ಣಪ್ಪನವರ ಮಾರ್ಗದರ್ಶನದಲ್ಲಿ ಹೋರಾಟದ ದೀಪವನ್ನು ಹಚ್ಚಿದವರು ಇವರು  ಎಂದರು.

    ಪ್ರೊ. ಬಿ. ಕೃಷ್ಣಪ್ಪನವರೊಂದಿಗೆ ಹೆಗಲು ಕೊಟ್ಟು ದೇವನೂರು ಮಹಾದೇವ, ಸಿದ್ದಲಿಂಗಯ್ಯ ಸೇರಿದಂತೆ ಅನೇಕ ದಿಗ್ಗಜರು ರಾಜ್ಯಾದ್ಯಂತ ಚಳುವಳಿ ಕಟ್ಟಿದರೆ, ತುಮಕೂರು ಜಿಲ್ಲೆಯಲ್ಲಿ ಆ ರಥವನ್ನು ಎಳೆಯುವ ಸಾರಥ್ಯವನ್ನು ನಾಗರಾಜು ವಹಿಸಿದ್ದರು,” ಎಂದು ನೆನಪಿಸಿಕೊಂಡರು.

    ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ವಿ.ಟಿ.ವೆಂಕಟರಾಮು, “1970ಕ್ಕೂ ಮೊದಲು ‘ದಲಿತ’ ಎಂಬ ಪದ ಚಾಲ್ತಿಯಲ್ಲಿರಲಿಲ್ಲ. ದಸಂಸ ಹುಟ್ಟಿನೊಂದಿಗೆ ಈ ಶಬ್ದ ಪರಿಚಯವಾಯಿತು. ಬುದ್ಧ, ಬಸವಣ್ಣ, ಪೆರಿಯಾರ್, ಫುಲೆ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡಿದ್ದ ನಾಗರಾಜುರವರು, ಶೋಷಣೆಯ ವಿರುದ್ಧ ಧ್ವನಿ ಎತ್ತುವ ಧೈರ್ಯವನ್ನು ಯುವ ಸಮುದಾಯಕ್ಕೆ ತುಂಬಿದರು,” ಎಂದರು.

    ಈ ಭಾವಪೂರ್ಣ ಕಾರ್ಯಕ್ರಮದಲ್ಲಿ ವಿವಿಧ ಪ್ರಗತಿಪರ ಮತ್ತು ದಲಿತ ಸಂಘಟನೆಗಳ ಮುಖಂಡರು, ಹೋರಾಟಗಾರರು ಭಾಗವಹಿಸಿ ದಿವಂಗತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಂದಕುಂಟೆ ನಾಗರಾಜು ಅವರ ಅಗಲಿಕೆಯಿಂದ ಪ್ರಗತಿಪರ ಹೋರಾಟದ ಒಂದು ಪ್ರಮುಖ ಕೊಂಡಿ ಕಳಚಿದಂತಾಗಿದೆ ಎಂದು ಗಣ್ಯರು ವಿಷಾದ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ

    September 21, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ

    September 8, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌

    September 29, 2026

    ಬೆಂಗಳೂರು: ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಎಸೆದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ,…

    ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!

    September 29, 2026

    ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

    September 29, 2026

    ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.