ಮೈಸೂರು: ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ ಇರುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿಕೆಗೆ ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಈ ಬಂಡೆ ಸಿಎಂ ಸಿದ್ದರಾಮಯ್ಯನವರ ಜೊತೆಗಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ನಿಖಿಲ್, ನಿನ್ನೆ ಸಿದ್ದರಾಮಯ್ಯನವರ ಜೊತೆ ಈ ಬಂಡೆ ಇದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಆದರೆ ಆ ಬಂಡೆಯಿಂದಲೇ ಸಿದ್ದರಾಮಯ್ಯನವರಿಗೆ ಸಮಸ್ಯೆ. ಬಂಡೆಯೇ ಸಿದ್ದರಾಮಯ್ಯನವರಿಗೆ ಪ್ರಾಬ್ಲಂ ಎಂದು ಟಾಂಗ್ ನೀಡಿದರು.
ಅದೇ ಬಂಡೆಯಿಂದ ತನಗೆ ಸಮಸ್ಯೆಯಾಗುತ್ತಿದೆ ಎಂಬುದು ಸ್ವತಃ ಸಿದ್ದರಾಮಣ್ಣನವರಿಗೂ ಗೊತ್ತು. ತನ್ನ ಜೊತೆಗಿರುವ ನಾಯಕರೇ ತನಗೆ ತೊಂದರೆ ಕೊಡುತ್ತಿದ್ದಾರೆ. ಯಾವ ಯಾವ ಕಾಂಗ್ರೆಸ್ ನಾಯಕರು ತನಗೆ ಸಮಸ್ಯೆಯಾಗಿದ್ದಾರೆ ಎಂಬುದು ಕೂಡ ಅವರಿಗೆ ತಿಳಿದಿದೆ ಎಂದು ನಿಖಿಲ್ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296