ಬೆಂಗಳೂರು: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಬಂದ್. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್. ಕನ್ನಡ-ರೈತ ಸಂಘಟನೆಗಳ ಒಕ್ಕೂಟ ‘ಕನ್ನಡ ಒಕ್ಕೂಟ’ ನೇತೃತ್ವದಲ್ಲಿ ಬಂದ್ ನಡೆಯುತ್ತಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ಎಲ್ಲ ಪ್ರಮುಖ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳು ಬಂದ್ ಪರವಾಗಿ ನಿಂತಿವೆ.
ಹಿಂಸಾಚಾರದ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗುರುವಾರ ಮಧ್ಯರಾತ್ರಿ 12 ರಿಂದ ಶುಕ್ರವಾರ ಮಧ್ಯರಾತ್ರಿ 12 ರವರೆಗೆ ಕರ್ಫ್ಯೂ ಘೋಷಿಸಲಾಗಿದೆ. ಮೈಸೂರು ಮತ್ತು ಮಂಡ್ಯ ಭಾಗದಲ್ಲಿ ಬಂದ್ ತೀವ್ರಗೊಳ್ಳುವ ನಿರೀಕ್ಷೆ ಇದೆ. ಬೆಳಗ್ಗೆ 11 ಗಂಟೆಗೆ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ವಾಹನಗಳನ್ನು ನಿರ್ಬಂಧಿಸಲಾಗುವುದು ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಪ್ರಕಟಿಸಿದೆ. ಕೇರಳದಿಂದ ಮೈಸೂರು ಮಾರ್ಗವಾಗಿ ಬರುವ ವಾಹನಗಳಿಗೆ ತೊಂದರೆಯಾಗಬಹುದು.
ಆನ್ ಲೈನ್ ಆಟೋ-ಟ್ಯಾಕ್ಸಿ ಸೇರಿದಂತೆ ಯಾವುದೇ ಸೇವೆಗಳಿಲ್ಲ. ಬೆಂಗಳೂರಿನಲ್ಲಿ ಹೋಟೆಲ್ ಗಳು ತೆರೆಯುವುದಿಲ್ಲ ಎಂದು ಹೋಟೆಲ್ ಮಾಲೀಕರ ಸಂಘ ತಿಳಿಸಿದೆ. ಚಿತ್ರಮಂದಿರಗಳು ಸಹ ಕಾರ್ಯನಿರ್ವಹಿಸುವುದಿಲ್ಲ. ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ವರದಿ : ಆಂಟೋನಿ ಬೇಗೂರು


