nammatumakuru

    Subscribe to Updates

    Get the latest creative news from FooBar about art, design and business.

    What's Hot

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026
    Facebook Twitter Instagram
    ಟ್ರೆಂಡಿಂಗ್
    • 7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ
    • e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು
    • ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?
    • ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 7 ಗಂಟೆಯಲ್ಲಿ ತಲುಪಬಹುದು!
    • ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ
    • ಬಿಜೆಪಿಗೆ ಮತ ಹಾಕಿದರೆ ಐದೂ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಬಂದ್: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
    • ಕಾಲು ಮುರಿದರೂ ನಿಲ್ಲದ ಕಾಯಕ: ತರಗತಿಯಲ್ಲೇ ಹಾಸಿಗೆ ಹಾಕಿ ಪಾಠ ಮಾಡುತ್ತಿರುವ ಶಾಸಕ ಪ್ರದೀಪ್ ಈಶ್ವರ್!
    • ಮೇಕೆದಾಟು ಯೋಜನೆಗೆ ಅನುಮತಿ ನೀಡಿ, ಕಸ್ತೂರಿರಂಗನ್ ವರದಿ ಹಿಂಪಡೆಯಿರಿ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ: ಮುಖ್ಯಮಂತ್ರಿ ಚಂದ್ರು
    ರಾಜ್ಯ ಸುದ್ದಿ September 28, 2023

    ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ: ಮುಖ್ಯಮಂತ್ರಿ ಚಂದ್ರು

    By adminSeptember 28, 2023No Comments2 Mins Read
    cm chandhru

    ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ತಿಳಿಸಿದರು.

    ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾಧ್ಯಮಗಳು ಕೂಡ ಬಂದ್ ಯಶಸ್ವಿಯಾಗಲು ಕಾರಣ ಎಂದು ಧನ್ಯವಾದ ತಿಳಿಸಿದರು. ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು ಎಂದು ಅವರು ಹೇಳಿದರು.

    ಬಂದ್ ಹಿಂದಿನ ದಿನ ಸಿಎಂ ಸಿದ್ದರಾಮಯ್ಯ ಅವರೇ ಸ್ವತಃ ನನಗೆ ಮತ್ತು ಕುರುಬೂರು ಶಾಂತಕುಮಾರ್ ಅವರಿಗೆ ಕರೆ ಮಾಡಿ, ಮೈಸೂರಿನಲ್ಲಿ ತುರ್ತು ಕಾರ್ಯಕ್ರಮ ಇರುವುದರಿಂದ ಜವಾಬ್ದಾರಿಯುತ ವ್ಯಕ್ತಿಯನ್ನು ಮನವಿ ಸ್ವೀಕರಿಸಲು ಕಳುಹಿಸುತ್ತೇನೆ. ಬಂದ ತಕ್ಷಣ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದರು ಎಂದು ಅವರು ಹೇಳಿದರು.

    ತಮಿಳರನ್ನು ನೋಡಿ ಕಲಿಯಬೇಕು

    ನಾನು ಮೂಲತಃ ರೈತ, ನಂತರ ಸಿನಿಮಾ ಕಲಾವಿದ, ನಾನು ಈಗ ಒಂದು ಪಕ್ಷ ಅಧ್ಯಕ್ಷನಾಗಿದ್ದರೂ, ಮೊದಲಿನಿಂದಲೂ ನಾಡು, ನುಡಿ, ನೀರಿಗಾಗಿ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ನಾಡಿಗೆ, ಭಾಷೆಗೆ, ನೀರಿಗೆ, ಗಡಿಗೆ ತೊಂದರೆಯಾದಾಗ ಪಕ್ಷ ಬೇಧ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು ಎಂದು ಹೇಳಿದರು.

    ಸುಪ್ರೀಂಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಕೊಡುವುದು ಇದ್ದಾಗ, ರಾಜ್ಯದಲ್ಲಿ ಬಂದ್ ಮಾಡಿದರೆ, ಇಲ್ಲಿನ ಸಮಸ್ಯೆ ಬಗ್ಗೆ ಅವರಿಗೂ ಸಂದೇಶ ಹೋಗಲಿದೆ. ನೀರು ಬಿಡಲು ಸೂಚನೆ ಕೊಟ್ಟರೆ ಅಶಾಂತಿ ಉಂಟಾಗಬಹುದು ಎಂದು ಚಿಂತನೆ ಮಾಡುತ್ತಾರೆ ಎನ್ನುವ ಉದ್ದೇಶದಿಂದ ತುರ್ತಾಗಿ ಬಂದ್ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಚಂದ್ರು ಸ್ಪಷ್ಟಪಡಿಸಿದರು.

    ಕಾವೇರಿ ನೀರಿಗಾಗಿ ಮಾತ್ರವಲ್ಲ ರಾಜ್ಯದ ಯಾವುದೇ ಭಾಗದಲ್ಲಿ ನಾಡು, ನುಡಿ, ಗಡಿ, ರೈತರಿಗೆ ಸಮಸ್ಯೆಯಾದಾಗ ಹೋರಾಟ ಮಾಡುತ್ತೇವೆ. ಮಹದಾಯಿ, ಕೃಷ್ಣ, ತುಂಗಭದ್ರಾ ಹೋರಾಟದಲ್ಲೂ ಭಾಗವಹಿಸುತ್ತೇವೆ ಎಂದು ಅವರು ಹೇಳಿದರು.

    ಜನರ ಹೋರಾಟಕ್ಕೆ ಜಯ ಸಿಕ್ಕಿದೆ

    ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ತಮಿಳುನಾಡು ಸರ್ಕಾರ 12500 ಕ್ಯೂಸೆಕ್ ನೀರು ಬಿಡುವಂತೆ ಮನವಿ ಮಾಡಿದ್ದರು. ಆದರೆ, ಈ ಮನವಿಯನ್ನು ತಿರಸ್ಕರಿಸಿ ನೀರು ಬಿಡುವ ಪ್ರಮಾಣವನ್ನು 3000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಇದಕ್ಕೆ ಬೆಂಗಳೂರು ಬಂದ್ ಮಾಡಿದ್ದು ಮತ್ತು ಬೆಂಗಳೂರು ಜನ ನೀಡಿದ ಬೆಂಬಲ ಕಾರಣ, ಬೆಂಗಳೂರು ಬಂದ್ ಯಶಸ್ವಿಯಾಗಿದೆ, ಜನರ ಹೋರಾಟಕ್ಕೆ ಜಯ ಸಿಕ್ಕಿದೆ ಎಂದು ಅವರು ಹೇಳಿದರು.

    admin
    • Website

    Related Posts

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 7 ಗಂಟೆಯಲ್ಲಿ ತಲುಪಬಹುದು!

    November 13, 2026

    Comments are closed.

    Our Picks

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026

    ‘ಆಸ್ಕರ್’ ಅಂಗಳಕ್ಕೆ ರಣಬೀರ್ ಕಪೂರ್, ಯಶ್ ಅಭಿನಯದ ‘ರಾಮಾಯಣ’! ಯಾವ ವಿಭಾಗಗಳಲ್ಲಿ ಸ್ಪರ್ಧಿಸಲಿದೆ ಸಿನಿಮಾ?

    November 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    7 ಮಂದಿಯ ಹತ್ಯೆ: ಆರೋಪಿ ಶೇಖರ್ ಮಾಡಿದ ‘ಕು’ತಂತ್ರ ಅಷ್ಟಿಷ್ಟಲ್ಲ, ಬೆಚ್ಚಿಬೀಳಿಸುವಂತಿದೆ ಕೃತ್ಯ

    November 13, 2026

    ಬೆಂಗಳೂರು: ರಾಜಾಜಿನಗರದಲ್ಲಿ ಇತ್ತೀಚೆಗೆ ನಡೆದಿದ್ದ ಒಂದೇ ಕುಟುಂಬದ ಏಳು ಜನರ ಭೀಕರ ಸರಣಿ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತಷ್ಟು…

    e–KYC ಮಾಡಿಸಲು ಲಂಚಕ್ಕೆ ಬೇಡಿಕೆ: ನ್ಯಾಯಬೆಲೆ ಅಂಗಡಿ ಪರವಾನಗಿ ಅಮಾನತು

    November 13, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 7 ಗಂಟೆಯಲ್ಲಿ ತಲುಪಬಹುದು!

    November 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.