ಕೊರಟಗೆರೆ: ಸಮಿಶ್ರ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ದೇವೇಗೌಡರು ತುಮಕೂರಿಗೆ ಬಂದ್ರೆ ಸ್ವಾಗತ. ಮಾಜಿ ಪ್ರಧಾನಿ ದೇವೇಗೌಡರನ್ನು ಗೆಲ್ಲಿಸಿದ್ರೆ ನಮ್ ತುಮಕೂರು ಕ್ಷೇತ್ರಕ್ಕೆ ಹೆಮ್ಮೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ಕೊರಟಗೆರೆ ತಾಲ್ಲೂಕಿನ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಮುಳುಗುವ ಹಡಗು ಎಂದರು.
ಬಿಜೆಪಿ ಪಕ್ಷವು ದೇವೇಗೌಡರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವಕಾಶ ಕೊಟ್ಟರೆ, ಬಹಳ ಸಂತೋಷ ಎಂದು ಇದೇ ವೇಳೆ ಹೇಳಿದರು.
ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖ ಮಠಕ್ಕೆ ಸೌಹಾರ್ದಯುತ ಭೇಟಿ ನೀಡಿದ ಕೆ.ಎನ್. ರಾಜಣ್ಣರವರಿಗೆ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಸನ್ಮಾನಿಸಿ ಆಶೀರ್ವಾದಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.