ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ 2 ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಸುಮಾರು 148 ಲಕ್ಷ ಮೌಲ್ಯದ 783 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಆರೋಪಿಗಳು ಚಿನ್ನದ ಸರಗಳನ್ನು ಮುಚ್ಚಿಟ್ಟುಕೊಂಡಿದ್ದರು. ಅವರ ಬಳಿಯಿದ್ದ 731.47 ಲಕ್ಷ ಮೌಲ್ಯದ 516 ಗ್ರಾಂನಷ್ಟು ಚಿನ್ನ ವಶಕ್ಕೆ ಪಡೆಯಲಾಗಿದೆ.
ಮತ್ತೊಂದು ಪ್ರಕರಣದಲ್ಲಿ ಟ್ರಾಲಿಬ್ಯಾಗ್ ನಲ್ಲಿ ದುಬೈನಿಂದ ರೇಡಿಯಂ ಲೇಪಿತ ಚಿನ್ನದ ಸರ, ತುಂಡು ತಂದಿದ್ದ ಪ್ರಯಾಣಿಕನನ್ನು ಬಂಧಿಸಿದ್ದು, ಆತನಿಂದ 116. 39 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


