ಬೆಂಗಳೂರು: ಬೆಂಗಳೂರು ಏರ್ ಶೋ 2025 ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಏರ್ ಶೋ 2025ರ ಉದ್ಘಾಟನಾ ಭಾಷಣ ಮಾಡಿದ ಅವರು, ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ.
ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx