ಸಾಮಾನ್ಯವಾಗಿ ಕಂಬಳದ ಬಳಿಕ ಕರಾವಳಿಯಲ್ಲಿ ಕೋಳಿ ಅಂಕ ನಡೆಯುತ್ತದೆ. ಆದರೆ ಬೆಂಗಳೂರು ಕಂಬಳದಲ್ಲಿ ಕೋಳಿ ಅಂಕವಿಲ್ಲ. ಆದರೆ ಫೈಟರ್ ಹುಂಜದ ಲಕ್ಕಿಡಿಪ್ ಕೌಂಟರ್ ತೆರೆಯಲಾಗಿದೆ. ವಿಜೇತರಿಗೆ ರುಚಿಯಾದ ಅಂಕದ ಕೋಳಿ ಸಿಗುತ್ತಿದೆ.
ಸಿಲಿಕಾನ್ ಸಿಟಿಯವರಿಗೆ ಅಂಕದ ಕೋಳಿಯ ರುಚಿ ತೋರಿಸಲು ಕರಾವಳಿ ಭಾಗದಿಂದ 300ಕ್ಕೂ ಅಧಿಕ ಅಂಕದ ಹುಂಜಗಳನ್ನು ತರಲಾಗಿದೆ.
ಕೋಳಿ ಅಂಕದಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಕೋಳಿಗೆ ಬಂಟೆ ಹಾಗೂ ಸೋತ ಕೋಳಿಗೆ ಒಟ್ಟೆ ಎಂದು ಕರೆಯಲಾಗುತ್ತದೆ.


