ಬೆಂಗಳೂರು: 2025ರ ಮಾರ್ಚ್ 1 ರಿಂದ 8ರ ವರೆಗೆ ₹9 ಕೋಟಿ ವೆಚ್ಚದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ‘ಸರ್ವ ಜನಾಂಗದ ಶಾಂತಿಯ ತೋಟ’ ಥೀಮ್‌ನಡಿ ಆಯೋಜಿಸಲಾಗುತ್ತಿದೆ.
ಈ ಬಾರಿ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು, 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ.
ಒರಾಯ್ ಮಾಲ್‌ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ. ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ.
ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು, ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx