ಕಾವೇರಿ ವಿಚಾರದಲ್ಲಿ ಸುಪ್ರೀಂ ತೀರ್ಪಿಗೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಗೆ ಕ್ರಮ ಕೈಗೊಂಡಿದೆ.
ಬೆಂಗಳೂರು ನಗರದಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವಂತೆ ಡಿಸಿಪಿಗಳಿಗೆ ನಗರ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದಾರೆ. ನಗರದ ಪಶ್ಚಿಮ, ಪೂರ್ವ, ಉತ್ತರ, ದಕ್ಷಿಣ ವಲಯ ಹಾಗೂ ವೈಟ್ ಫೀಲ್ಡ್ ಸೇರಿ ಎಲ್ಲೆಡೆ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದಾರೆ.


