ಬೆಂಗಳೂರು: ನವೋದ್ಯಮಗಳು ಮತ್ತು ಜಾಗತಿಕ ಮಟ್ಟದ ಹೂಡಿಕೆದಾರರನ್ನು ಒಂದೇ ವೇದಿಕೆಯಲ್ಲಿ ತರಲು ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ — 2024 ಇದೇ ನವೆಂಬರ್ 19 ರಿಂದ 21ರ ವರೆಗೆ ನಡೆಯಲಿದೆ ಎಂದು ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಆಸ್ಟ್ರೇಲಿಯಾ, ಬ್ರಿಟನ್, ಫ್ರಾನ್ಸ್, ಆಸ್ಟ್ರೀಯ, ಜರ್ಮನಿ, ಸ್ವಿಡ್ಜರ್ಲೆಂಡ್, ಇಸ್ರೇಲ್, ಅಮೆರಿಕದ ಸಹಯೋಗದಲ್ಲಿ ಶೃಂಗಸಭೆ ನಡೆಯಲಿದೆ. ಉದ್ಘಾಟನೆ ಸಮಾರಂಭದಲ್ಲಿ ಜರ್ಮನಿಯ ಆರ್ಥಿಕ ಇಲಾಖೆಯ ಮುಖ್ಯಸ್ಥರು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮೂರು ದಿನಗಳ ಶೃಂಗಸಭೆಯಲ್ಲಿ ನವೋದ್ಯಮಗಳಿಗೆ ಸಂಬಂಧಿಸಿದಂತೆ ಹಲವು ವಿಚಾರಗೋಷ್ಠಿಗಳು ನಡೆಯಲಿವೆ. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನವೋದ್ಯಮಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q