ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಯಶೋಧಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾದವರು. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದಾಳೆ. ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್ ತಾಯಿ ಯಶೋಧಾ ಜತೆ ನೆಲೆಸಿದ್ದರು. ಆದ್ರೆ ಮೂವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ನರೇಶ್ ವೃತ್ತಿಯಲ್ಲಿ ಕಾಂಟ್ರಾಕ್ಟರ್ ಆಗಿದ್ದ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy