ಬೆಂಗಳೂರು: ಬೇಡಜಂಗಮ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಸಲುವಾಗಿ ಹೋರಾಟ ಹಿನ್ನೆಲೆ ಬೆಂಗಳೂರಿಗೆ ಹೊರಟಿದ್ದ ಪ್ರತಿಭಟನಾಕಾರರನ್ನು ಶಿರಾ ಟೋಲ್ ಗೇಟ್ ಬಳಿ ಪೊಲೀಸರು ತಡೆದಿದ್ದಾರೆ.
ಇಂದು ಬೆಂಗಳೂರು ಚಲೋ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆಂದು ತೆರಳುತ್ತಿದ್ದವರನ್ನು ಪೊಲೀಸರು ಶಿರಾ ಟೋಲ್ ಗೇಟ್ ಬಳಿ ತಡೆದಿದ್ದಾರೆ. ಪ್ರತಿಭಟನಾಕಾರರ ಪೈಕಿ ಮಠಾಧೀಶರು ಕೂಡ ಇದ್ದು, ಮಠಾಧೀಶರನ್ನೂ ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ನೂರಾರು ವಾಹನಗಳ ಮೂಲಕ ಪ್ರತಿಭಟನಾಕಾರರು ಬೆಂಗಳೂರಿಗೆ ಹೊರಟಿದ್ದರು. ಪ್ರತಿಭಟನಾಕಾರರನ್ನು ತಡೆದಿದ್ದರಿಂದ ಆಕ್ರೋಶಗೊಂಡ ಸಾವಿರಾರು ಪ್ರತಿಭಟನಾಕಾರರು ಸ್ಥಳದಲ್ಲೇ ಧರಣಿ ನಡೆಸುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟವನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


