nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026
    Facebook Twitter Instagram
    ಟ್ರೆಂಡಿಂಗ್
    • ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ
    • ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನ ಸಂಗೀತ ಕಾರಂಜಿಯನ್ನು ಪುನರ್‌ ಸ್ಥಾಪಿಸಲು ಪ್ರಸ್ತಾಪ
    ರಾಜ್ಯ ಸುದ್ದಿ November 16, 2022

    ಬೆಂಗಳೂರಿನ ಸಂಗೀತ ಕಾರಂಜಿಯನ್ನು ಪುನರ್‌ ಸ್ಥಾಪಿಸಲು ಪ್ರಸ್ತಾಪ

    By adminNovember 16, 2022No Comments2 Mins Read
    sangitha karanjje

    ಬೆಂಗಳೂರು ಮಹಾನಗರದ ಅಂದಿನ ಜನಪ್ರಿಯ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದೆ. ಹಲವು ವರ್ಷಗಳಿಂದ ಕರ್ನಾಟಕದಲ್ಲಿ ವಾಸಿಸುತ್ತಿರುವವರಿಗೆ ಕೃಷ್ಣರಾಜಸಾಗರದ ಅತ್ಯಂತ ದೊಡ್ಡ ಜನಪ್ರಿಯತೆಯನ್ನು ಪಡೆದಂತಹ ಬೃಂದಾವನ ಉದ್ಯಾನವನದಲ್ಲಿರುವ ಸಂಗೀತ ಕಾರಂಜಿಯ ಬಗ್ಗೆ ತಿಳಿದೇ ಇರುತ್ತದೆ. ಬೆಂಗಳೂರಿಗರು ಒಂದು ಕಾಲದಲ್ಲಿ ಅಲ್ಲಿನ ಸಂಗೀತ ಕಾರಂಜಿಯನ್ನು ನೋಡಲು ಇಲ್ಲಿಂದ ಮಂಡ್ಯದಲ್ಲಿರುವ ಬೃಂದಾವನ ಉದ್ಯಾನವನಕ್ಕೆ ತೆರಳುತ್ತಿದ್ದರು.

    ಹಾಗಾಗಿ, ಸಂಬಂಧಪಟ್ಟ ಪ್ರಾಧಿಕಾರಗಳು ನಮ್ಮ ಬೆಂಗಳೂರಿನಲ್ಲಿಯೂ ಅದೇ ರೀತಿಯ ಒಂದು ಸಂಗೀತ ಕಾರಂಜಿಯನ್ನು ಸ್ಥಾಪಿಸಲು ನಿರ್ಧರಿಸಿದರು. ಇದರ ಫಲವಾಗಿ ೧೯೯೪ರಲ್ಲಿ ಬೆಂಗಳೂರಿನ ಇಂದಿರಾ ಗಾಂಧಿ ಸಂಗೀತ ಕಾರಂಜಿ ಅಸ್ತಿತ್ವಕ್ಕೆ ಬಂತು. ಈ ಕಾರಂಜಿ ೬೦ ಅಡಿ ಉದ್ದ ಹಾಗೂ ೧೫ ಅಡಿ ಅಗಲವಿದೆ. ಈ ಕಾರಂಜಿಯೂ ಸಹ ಬೆಂಗಳೂರಿಗರ ಪೈಕಿ ದೊಡ್ಡ ಹಟ್ ಆಗಿತ್ತು. ಆದರೆ ೨೦೧೨ರಲ್ಲಿ ಈ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿತ್ತು. ಅಂದಿನಿಂದ ಇದನ್ನು ಸರಿಪಡಿಸಲಾಗಿಲ್ಲ.


    Provided by
    Provided by

    ಜೊತೆಗೆ, ಇಲ್ಲಿ ಒಂದು ಪುಟಾಣಿ ರೈಲು (ಟಾಯ್ ಟ್ರೇನ್) ಸಹ ಇದ್ದು, ಇದೂ ಸಹ ಈ ಉದ್ಯಾನವನದ ಮುಖ್ಯ ಆಕರ್ಷಣೆಯಾಗಿತ್ತು. ಆದರೆ ಈ ಪುಟಾಣಿ ರೈಲು ಸಹ ಕೆಟ್ಟು ನಿಂತಿದೆ. ಈ ಸಂಬಂಧ ಮಾತನಾಡಿದ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಈ ಪುಟಾಣಿ ರೈಲನ್ನು ದುರಸ್ತಿಗೊಳಿಸಲು ಹಣ ಸಹಾಯ ನೀಡುವಂತೆ ಹಲವು ಬಾರಿ ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದು, ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ ಎಂದು ತಿಳಿಸಿದ್ದಾರೆ. ಆದರೆ ಸಾಧ್ಯವಾದಷ್ಟು ಬೇಗ ಈ ಪುಟಾಣಿ ರೈಲಿನ ದುರಸ್ತಿ ಮುಗಿದು ಮತ್ತೊಮ್ಮೆ ಹಳಿಗಳ ಮೇಲೆ ಓಡಲಾರಂಭಿಸುವ ವಿಶ್ವಾಸವಿದೆ ಎಂದು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ.

    ಈಗ ಸಂಬಂಧಪಟ್ಟ ಪ್ರಾಧಿಕಾರಗಳು ಹೇಳುತ್ತಿರುವುದೇನೆಂದರೆ ಸಂಗೀತ ಕಾರಂಜಿ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿ ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯವಾಗಿದ್ದು, ನೀರು ಶೇಖರಣಾ ತೊಟ್ಟಿಗಳು ಸೇರಿದಂತೆ ಬಹುತೇಕ ಎಲ್ಲವನ್ನೂ ದುರಸ್ತಿಪಡಿಸಬೇಕಿದೆ. ಆದರೆ ತೋಟಗಾರಿಕೆ ಇಲಾಖೆಯಲ್ಲಿ ಹಣವಿಲ್ಲದಿರುವುದೇ ಇರುವುದರಿಂದಾಗಿ ಸಂಗೀತ ಕಾರಂಜಿ ಹಾಗೂ ಇತರೆ ವ್ಯವಸ್ಥೆಗಳನ್ನು ಸರಿಪಿಡಸಲು ಸಿಎಸ್‌ ಆರ್ ನಿಧಿಯನ್ನು ಎದುರು ನೋಡುತ್ತಿದೆಯಂತೆ.

    ಮೂಲಗಳ ಪ್ರಕಾರ, ಈ ಸಂಗೀತ ಕಾರಂಜಿ ಇರುವ ಉದ್ಯಾನವನ, ತಾರಾಲಯ, ಬಾಲ ಭವನ ಹಾಗೂ ಕಬ್ಬನ್ ಉದ್ಯಾನವನಗಳಿಗೆ ಹತ್ತಿರವಿರುವ ಕಾರಣದಿಂದಾಗಿ ಇಲ್ಲಿನ ಸಂಗೀತ ಕಾರಂಜಿ ಮಕ್ಕಳಲ್ಲಿ ಬಹಳ ಖ್ಯಾತಿಯನ್ನು ಗಳಿಸಿತ್ತು. ಪ್ರತಿ ದಿನ ನೂರಾರು ಸಂಖ್ಯೆಯಲ್ಲಿ ಮಕ್ಕಳು ಇಲ್ಲಿಗೆ ಬರುತ್ತಿದ್ದರು. ಈ ಸಂಗೀತ ಕಾರಂಜಿ ಈ ಹಿಂದೆ ವಾರದಲ್ಲಿ ಆರು ದಿನಗಳ ಕಾಲ ಪ್ರತಿ ದನ ಎರಡು ಪ್ರದರ್ಶನಗಳನ್ನು ಒಳಗೊಂಡಿತ್ತು (ರಾತ್ರಿ ೭-೭.೩೦ ಹಾಗೂ ೮ ರಿಂದ ೮.೩೦ ರವರೆಗೆ).

    ಈ ಸಂಬಂಧ ಮಾತನಾಡಿದ ತೋಟಗಾರಿಕಾ ಇಲಾಖೆಯ ಅಧಿಕಾರಿಯೊಬ್ಬರು, “ನಾವು ರಾಜ್ಯ ಸರ್ಕಾರಕ್ಕೆ ಇಲ್ಲಿನ ಮೂಲಭೂತಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅನುದಾನ ಒದಗಿಸಬೇಕೆಂದು ಕೋರಿ ವಿವರವಾದ ವರದಿಯೊಂದನ್ನು ಸಲ್ಲಿಸಿದ್ದೆವು. ವಾಸ್ತವದಲ್ಲಿ ಸರ್ಕಾರವೂ ಸಹ ೨೦೧೫ರಲ್ಲಿ ರಾಜ್ಯ ಆಯವ್ಯಯದಲ್ಲಿ ಇದಕ್ಕಾಗಿ ಹಣ ಒದಗಿಸುವುದಾಗಿ ಆಶ್ವಾಸನೆಯನ್ನೂ ನೀಡಿತ್ತು. ಆದರೆ ಅದು ಕೇವಲ ಆಶ್ವಾಸನೆಯಾಗಿಯೇ ಉಳಿದುಕೊಂಡಿದ್ದು, ಹಣ ಬಿಡುಗಡೆ ಆಗಲೇ ಇಲ್ಲ. ಅಂದಿನಿಂದ ನಾವು ಹಣಕಾಸು ಇಲಾಖೆಗೆ ಹಲವು ಬಾರಿ ಹಣ ಬಿಡುಗಡೆಗೊಳಿಸುವಂತೆ ಕೋರಿ ಪತ್ರಗಳನ್ನು ಬರೆದಿದ್ದೇವೆ. ಆದರೆ ಇಲ್ಲಿಯವರೆಗೆ ಅದೃಷ್ಟ ಬಂದಿಲ್ಲ.

    ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಿಂಗಪೂರ್‌ ನ ಒಂದು ಕಂಪನಿಯನ್ನು ಗುರುತಿಸಲಾಗಿತ್ತು. ಇಡೀ ಸಂಗೀತ ಕಾರಂಜಿ ವ್ಯವಸ್ಥೆಯನ್ನು ದುರಸ್ತಿಗೊಳಿಸಲು ರೂ.೧೬ ಕೋಟಿ ಅಗತ್ಯವಿದೆ. ಜೊತೆಗೆ ನಾವು ಇಲ್ಲಿ ಲೇಸರ್ ಪ್ರದರ್ಶನವನ್ನೂ ಸಹ ಏರ್ಪಡಿಸಲು ಯೋಜಿಸಿದ್ದೇವೆ. ಆದರೆ ರಾಜ್ಯ ಹಣಕಾಸು ಇಲಾಖೆಯವರು ಕೇವಲ ರೂ.೨ ಕೋಟಿ ನೀಡುವುದಾಗಿ ತಿಳಿಸಿತು, ಇದು ಯಾವುದಕ್ಕೂ ಸಾಲುವುದಿಲ್ಲ,” ಎಂದು ವಿವರಿಸಿದರು.

    ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಹೆಚ್.ಟಿ. ಬಾಲಕೃಷ್ಣ ಅವರು ಹೇಳಿದಂತೆ ಈ ಉದ್ಯಾನವನದ ಪುನರ್ ಅಭಿವೃದ್ಧಿಗಾಗಿ ಕನಿಷ್ಠ ರೂ. ೧೦ ರಿಂದ ರೂ.೧೨ ಕೋಟಿಗಳ ಅಗತ್ಯವಿದೆ. ಆದರೆ ಇಲಾಖೆಯ ಬಳಿ ಅಷ್ಟು ಹಣ ಇಲ್ಲದಿರುವ ಕಾರಣದಿಂದಾಗಿ ವಿವಿಧ ಕಾರ್ಪೊರೇಟ್ ಸಂಸ್ಥೆಗಳ ಮೊರೆ ಹೋಗಿದ್ದಾರಂತೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆಗೆ ಆಗ್ರಹ: ತಿಪಟೂರು ಉಪ ವಿಭಾಗಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

    April 20, 2026

    ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಕರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಗ್ರಾಮದ ಬಳಿ ಸರ್ವೀಸ್ ರಸ್ತೆ ಹಾಗೂ ತಂಗುದಾಣ…

    ಮೇವು ಲಭ್ಯತೆ ಪರಿಶೀಲಿಸಿ: ರಾಷ್ಟ್ರೀಯ ಲಸಿಕಾ ಕಾರ್ಯಕ್ರಮ ಅಭಿಯಾನ ಕುರಿತು ಚರ್ಚೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 20, 2026

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.