ಬೆಂಗಳೂರು: ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಸವಾರ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.
ನಿನ್ನೆ ರಾತ್ರಿ ಯುವತಿ ರ‍್ಯಾಪಿಡೋ ಬೈಕ್ ಬುಕ್ ಮಾಡಿದ್ದಳು. ಈ ವೇಳೆ ರ‍್ಯಾಪಿಡೋ ಬೈಕ್ ಸವಾರ ಯುವತಿಯನ್ನು ಬಿಟಿಎಂ ಲೇಔಟ್ನಿಂದ ಪಿಕ್ ಮಾಡಿ ಎಲೆಕ್ಟ್ರಾನಿಕ್ಸಿಟಿಯಲ್ಲಿರುವ ಆಕೆಯ ಮನೆಗೆ ಡ್ರಾಪ್ ಮಾಡಬೇಕಿತ್ತು. ಆದ್ರೆ ಯುವತಿ ಕುಡಿದ ನಶೆಯಲ್ಲಿರುವುದನ್ನು ಗಮನಿಸಿ ಆಕೆಯನ್ನು ಮನೆಗೆ ಬಿಡುವ ಬದಲು ರೂಮ್ಗೆ ಕರೆದೊಯ್ದಿದ್ದಿದ್ದಾನೆ.
ಯುವತಿಯನ್ನು ತನ್ನ ರೂಮ್ಗೆ ಕರೆದೊಯ್ದು ರ‍್ಯಾಪಿಡೋ ಬೈಕ್ ಸವಾರ ಮತ್ತು ಆತನ ಸ್ನೇಹಿತ ಅತ್ಯಾಚಾರವೆಸಗಿದ್ದಾರೆ. ಘಟನೆ ಬಗ್ಗೆ ಎಲೆಕ್ಟ್ರಾನಿಕ್ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ರ‍್ಯಾಪಿಡೋ ಬೈಕ್ ಸವಾರ ಶಹಾಬುದ್ದೀನ್ ಮತ್ತು ಆತನ ಸ್ನೇಹಿತ ಅಖ್ತರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy