ಬೆಂಗಳೂರು: ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ಉದ್ಯಮಿಗಳಿಂದ ದಾಖಲೆ ಪಡೆದು ವಂಚಿಸುತ್ತಿದ್ದ ಯುಸೂಫ್ ಎಂಬ ಆರೋಪಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎಂಬುವರಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ಬಳಿಕ, ಕೃಷ್ಣನ್ ಅವರನ್ನು ಬ್ಯಾಂಕ್ ಗೆ ಕರೆದೊಯ್ದು ಅರ್ಜಿಗಳಿಗೆ ಸಹಿ ಮಾಡಿಸಿಕೊಂಡಿದ್ದ.


