ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುಡಿದ ಮತ್ತಿನಲ್ಲಿ ಕುಡುಕನೋರ್ವ ಬಾರ್ ಸಿಬ್ಬಂದಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಸಂತೋಷ್(40) ಕೊಲೆಯಾದ ಬಾರ್ ಸಿಬ್ಬಂದಿಯಾಗಿದ್ದು, ಜನತಾ ಕಾಲೋನಿಯ ಹರ್ಷ ಕೊಲೆ ಆರೋಪಿಯಾಗಿದ್ದಾನೆ.
ಕುಶಾಲನಗರದ ಬಾರ್ & ರೆಸ್ಟೋರೆಂಟ್ ನಲ್ಲಿ ಭಾನುವಾರ ರಾತ್ರಿ ಈ ಕೃತ್ಯ ನಡೆದಿದ್ದು, ಕಂಠಪೂರ್ತಿ ಕುಡಿದಿದ್ದ ಹರ್ಷ, ಅಮಲಿನಲ್ಲಿ ಸಂತೋಷ್ ಜೊತೆಗೆ ಜಗಳ ಮಾಡಿದ್ದಾನೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ಹದಗೆಟ್ಟು, ವಿಕೋಪಕ್ಕೆ ಹೋಗಿದೆ. ಇದರಿಂದ ಕೋಪಗೊಂಡು ಹರ್ಷ ಬಿಯರ್ ಬಾಟಲಿಯಿಂದ ಸಂತೋಷ್ ನ ತಲೆ ಮತ್ತು ಕುತ್ತಿಗೆಗೆ ಬಲವಾಗಿ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಗಾಯಳು ಸಂತೋಷ್ ಜೀವ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿ ಹರ್ಷನನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕುಶಾಲನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


