ಮಂಡ್ಯ : ಭಾರತ್ ಜೋಡೋ ಪಾದಯಾತ್ರೆ ಬಳಿಕ ರಾಜ್ಯಾದ್ಯಂತ ಬಸ್ ಯಾತ್ರೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದತೆ ನಡೆಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಥಯಾತ್ರೆಯನ್ನು ಈ ಹಿಂದೆ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿತ್ತು.
ಆದರೆ, ಕೆಲ ಕಾರಣಗಳಿಂದ ದಿನಾಂಕ ನಿಗದಿಗೊಳಿಸಲು ವಿಳಂಬವಾಗಿದೆ. ಬಸ್ ಯಾತ್ರೆ ಕುರಿತು ಪೂರ್ವಭಾವಿ ಸಭೆ ಈ ತಿಂಗಳು ಕೊನೆಯಲ್ಲಿ ನಡೆಯಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಸ್ ಯಾತ್ರೆ ನಡೆಯಲಿದೆ.
ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರು ಬಸ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ವರಿಷ್ಠರನ್ನು ಸದ್ಯದಲ್ಲೇ ಭೇಟಿ ಮಾಡಿ ಅವರ ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


