ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಸಾಧನೆ ಪ್ರಗತಿಯನ್ನ ಕೊಂಡಾಡಿದರು.
ಸಮಾವೇಶವನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಕನ್ನಡಿಗರು ಕನ್ನಡ ಭಾಷೆಯನ್ನೇ ಜೀವಾಳವಾಗಿಸಿಕೊಂಡಿದ್ದಾರೆ. ಇದು ಶ್ರೀಮಂತ ಸಂಸ್ಕೃತಿ ಹೊಂದಿರುವ ನಾಡು. ಕರ್ನಾಟಕದ ಮಣ್ಣು ಎಲ್ಲದಕ್ಕಿಂತ ಸುಂದರ. ಪ್ರತಿಭೆ ತಂತ್ರಜ್ಞಾನದ ಬ್ರಾಂಡ್ ಹೊಂದಿರುವ ಬೆಂಗಳೂರು. ಮೃದು ಭಾಷೆ ಕನ್ನಡ. ಕರ್ನಾಟಕ ಅಪಾರ ಪ್ರಾಕೃತಿಕ ಸಂಪತ್ತು ಹೊಂದಿರುವ ರಾಜ್ಯ. ಕರ್ನಾಟಕದಲ್ಲಿ ತಂತ್ರಜ್ಞಾನದ ಜೊತೆ ಸಂಸ್ಕೃತಿಯೂ ಇದೆ. ಕರ್ನಾಟಕದಲ್ಲಿ ಉತ್ಪಾದನೆ ಪ್ರಮಾಣ ಹೆಚ್ಚಳವಾಗುತ್ತಿದೆ. ತಂತ್ರಜ್ಞಾನ ಬಳಕೆಯಲ್ಲಿ ಕರ್ನಾಟಕ ಸಾಕಷ್ಟು ಮುಂಚೂಣಿಯಲ್ಲಿದೆ ಎಂದು ನುಡಿದರು.
ಭಾರತದ ಅಭಿವೃದ್ಧಿಗೆ ಕರ್ನಾಟಕದ ಕೊಡುಗೆ ಅಪಾರ. ಕರ್ನಾಟಕ ಇಡೀ ಜಗತ್ತನ್ನೇ ಸೆಳೆದ ರಾಜ್ಯ. ಕರ್ನಾಟಕ ಎಲ್ಲದರಲ್ಲೂ ಮುನ್ನಡೆಯುತ್ತಿದೆ. ಹೂಡಿಕೆಯಿಂದಾಗಿ ಉದ್ಯೋಗ ಸೃಷ್ಠಿಯಾಗುತ್ತದೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ಶಕ್ತಿ ಇದೆ. ಕೇಂದ್ರ ರಾಜ್ಯದಲ್ಲಿ ಒಂದೇ ಪಕ್ಷ ಇರುವುದರಿಂದ ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದೆ ಎಂದು ಹೇಳಿದರು.
ಹಾಗೆಯೇ ಭಾರತದ ಅರ್ಥ ವ್ಯವಸ್ಥೆ ದಿನೇ ದಿನೇ ಸುಧಾರಿಸುತ್ತಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚಳವಾಗಿದೆ. ಮೆಟ್ರೋ ರೈಲು ವ್ಯವಸ್ಥೆಯನ್ನ ವಿಸ್ತರಿಸಲಾಗಿದೆ. ದೇಶದಲ್ಲಿ ಏರ್ ಪೋರ್ಟ್ ಸಂಖ್ಯೆ ಹೆಚ್ಚಳವಾಗಿದೆ.
ಉದ್ಯಮಿಗಳು ಪಿಎಂ ಗತಿಶಕ್ತಿ ಯೋಜನೆ ಕಡೆಯೂ ನೋಡಬೇಕು. ಗತಿ ಶಕ್ತಿ ಯೋಜನೆಯೂ ದೇಶದ ಮೂಲಕ ಸೌಕರ್ಯಗಳ ಪ್ಲಾನ್ ಆಗಿದೆ. ದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಮಾಡಲಾಗುತ್ತಿದೆ. ದೇಶದಲ್ಲಿ ಡಿಜಿಟಲ್ , ಬ್ಯಾಂಕಿಂಗ್ ಸುಧಾರಣೆಯಾಗುತ್ತಿದೆ. ಭಾರತದ ತಾಕತ್ತು ಈಗ ಜಗತ್ತಿಗೆ ಗೊತ್ತಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


