ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 33,750 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. 123 ಜನ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಲ್ಲಿ ಒಟ್ಟು 1,45,582 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 10,846 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 3,42,95,407 ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ ಒಂದು ದಿನದಲ್ಲಿ 123 ಜನ ಸೋಂಕಿತರು ಸಾವನ್ನಪ್ಪಿರುವುದು ಸೇರಿದಂತೆ ಈ ಮೂಲಕ ಒಟ್ಟು ದೇಶದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿತ್ತು. ಆದರೆ ಕಳೆದ ಒಂದು ವಾರದಿಂದ ಸೋಂಕಿನ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 3,194, ಮಹಾರಾಷ್ಟ್ರದಲ್ಲಿ 11,877, ಕರ್ನಾಟನದಲ್ಲಿ 1,187 ಪ್ರಕರಣಗಳು ಪತ್ತೆಯಾಗಿವೆ. ಶೇ.28ರಷ್ಟು ಕೋವಿಡ್ ಕೇಸ್ಗಳು ಮಹಾರಾಷ್ಟ್ರದಲ್ಲಿ ಕಂಡುಬಂದಿರುವುದು ಆತಂಕಕ್ಕೆ ಎಡೆಮಾಡಿದೆ. ಕೋವಿಡ್ ಜೊತೆಗೆ ಓಮಿಕ್ರಾನ್ ವೈರಸ್ ಸೋಂಕಿನ ಪ್ರಕರಣಗಳು ಕೂಡ ಹೆಚ್ಚಾಗುತ್ತಲೇ ಇವೆ.ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ದೇಶದಲ್ಲಿ ಒಟ್ಟು 1700 ಓಮಿಕ್ರಾನ್ ಪ್ರಕರಣಗಳಿದ್ದು, 639 ಮಂದಿ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರ ಒಂದರಲ್ಲಿ 351 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy