ಬೆಂಗಳೂರು: 17 ವರ್ಷ ವಯಸ್ಸಿನ ಬಾಲಕನನ್ನು ರಾಡ್ ನಿಂದ ಹೊಡೆದು ಹತ್ಯೆ ಮಾಡಿ, ಖಾಲಿ ಜಾಗವೊಂದರಲ್ಲಿ ಎಸೆದು ಹೋಗಿರುವ ಘಟನೆ ಬೆಂಗಳೂರಿನ ಗಂಗಮ್ಮಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆ ಬಳಿ ನಡೆದಿದೆ.
ಅಬ್ಬಿಗೆರೆಯ 17 ವರ್ಷದ ಬಾಲಕ ಮಂಜುನಾಥ್ ಎಂಬಾತನೆ ಕೊಲೆಯಾದ ಬಾಲಕ. ಕಳೆದ ರಾತ್ರಿ ಈತನನ್ನು ಹತ್ಯೆ ಮಾಡಲಾಗಿದೆ. ರಾಡ್ ನಲ್ಲಿ ತಲೆಗೆ ತೀವ್ರವಾಗಿ ದಾಳಿ ಮಾಡಿದ್ದರಿಂದ ಮಂಜುನಾಥ್ ಸಾವನ್ನಪ್ಪಿದ್ದಾನೆ. ನಂತರ ದುಷ್ಕರ್ಮಿಗಳು ಮೃತದೇಹವನ್ನು ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಎಸೆದು ಪರಾರಿಯಾಗಿದ್ದಾರೆ.
ಪ್ರೀತಿ ವಿಚಾರಕ್ಕಾಗಿ ಜಗಳ ನಡೆದು, ಅದು ವಿಕೋಪಕ್ಕೆ ತಿರುಗಿದ್ದರಿಂದ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಗಂಗಮ್ಮನ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


