ಬೆಂಗಳೂರು: ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯ ಪಾರ್ಕ್‌ನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
ಪನ್ನಿರ್ ಸೆಲ್ವಂ(37) ಹತ್ಯೆಗೀಡಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ಆರೋಪಿಗಳು ಕೃತ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಮಲ್ಲೇಶ್ವರಂನ ಎಂಡಿ ಬ್ಲಾಕ್ ನಿವಾಸಿಯಾಗಿದ್ದ ಪನ್ನೀರ್ ಸೆಲ್ವಂ ಗಾರೆ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಪನ್ನೀರ್ ಸೆಲ್ವಂಗೆ ನಾಲ್ವರು ಚಿಕ್ಕಮಕ್ಕಳಿದ್ದು, ಪತ್ನಿ ಜೊತೆ ವಾಸವಿದ್ದರು. ನಿನ್ನೆ ಸಂಜೆ ಯಾವುದೋ ವಿಚಾರಕ್ಕೆ ಪನ್ನೀರ್ ಸೆಲ್ವಂ ಹಾಗೂ ಇತರ ಇಬ್ಬರು ವ್ಯಕ್ತಿಗಳು ಪಾರ್ಕ್‌ನಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.
ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


