ಬೆಳಗಾವಿ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ನಡುರಸ್ತೆಯಲ್ಲಿ ವ್ಯಕ್ತಿಯ ಭೀಕರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.
ಬೀರೇಶ್ವರ ದೇವರ ಜಾತ್ರಾ ಮಹೋತ್ಸವ ಜಾತ್ರಾ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ ಮನೆಗೆ ತೆರಳುವ ಸಂದರ್ಭದಲ್ಲಿ ಯಾರೋ ಆತನ ತಲೆ ಮೇಲೆ ಕಲ್ಲು ಎತ್ತಾಕಿ ಕೊಲೆ ಮಾಡಿದ್ದಾರೆ.
ಮಹೇಶ ಕುರ್ಣಿ ಕುಡಿತದ ಚಟ ಹೊಂದಿದ್ದರು. ಮಹೇಶ ಅವರ ಪ್ಯಾಮಿಲಿ ಬೆಳಗಾವಿಯಲ್ಲಿ ಸೆಟಲ್ ಆಗಿದ್ದಾರೆ. ಮಕ್ಕಳ ನೌಕರಿಗಾಗಿ ಈತನು ಸಹ ಬೆಳಗಾವಿಯಲ್ಲೆ ನೆಲೆಸಿದ್ದ. ಆದ್ರೆ ಯಕ್ಸಂಬಾ ಪ್ಟಣದಲ್ಲಿರೋ ತನ್ನ ಒಂದು ಎಕರೆ ಜಮೀನು ಹಾಳಾಗುತ್ತೆ ಎನ್ನುವ ಕಾರಣಕ್ಕೆ ಮಹೇಶ ಯಕ್ಸಂಬಾ ಪಟ್ಟಣದಲ್ಲಿ ಒಬ್ಬನೇ ವಾಸವಾಗಿದ್ದ. ಆತನ ಸಂಬಂಧಿಕರು ಹೇಳುವಂತ, ಮಹೇಶ ಕುರ್ಣೆ ಯಾವಾಗಲಾದ್ರೂ ಮದ್ಯಸೇವನೆ ಮಾಡ್ತಿದ್ದನಂತೆ.
ಊರಲ್ಲಿ ಯಾರೊಂದಿಗೂ ಜಗಳವಾಡಿರಲಿಲ್ಲವಂತೆ. ನಿನ್ನೆ ರಾತ್ರಿ ಜಾತ್ರೆ ನಿಮಿತ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ನೋಡಿ ವಾಪಸ್ಸಾಗುವ ಸಂದರ್ಭದಲ್ಲಿ ಯಾರೋ ಆತನನ್ನು ಕೊಲೆ ಮಾಡಿದ್ದಾರೆ ಎನ್ನುತ್ತಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಲ್ಲ ಆಯಾಮಗಳಲ್ಲೂ ತನಿಖೆ ಆರಂಭಿಸಿದ್ದಾರೆ. ಸುತ್ತಮುತ್ತಲಿನ ಯಾವುದಾದರು ಅಂಗಡಿಗಳ ಸಿಸಿಟಿವಿ ಕ್ಯಾಮರಾಗಳಲ್ಲಿ ಕೃತ್ಯ ಸೆರೆಯಾಗಿದೆಯಾ ಎಂಬುದನ್ನು ಸಹ ಚೆಕ್ ಮಾಡಿದ್ದಾರೆ. ಸೌಮ್ಯಸ್ವಭಾವದ ಮಹೇಶ ಕುರ್ಣೆಯ ಹತ್ಯೆಯ ಹಿಂದಿನ ರಹಸ್ಯ ಪೊಲೀಸರ ತನಿಖೆಯಿಂದ ಬಯಲಾಗಬೇಕಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


