ಶಿವಮೊಗ್ಗ: ಒಂಟಿ ಮಹಿಳೆಯೊಬ್ಬರನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಆಯನೂರು ಬಳಿ ನಡೆದಿದೆ.
ಸಾವಿತ್ರಮ್ಮ (65) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ತಡರಾತ್ರಿ ಮಹಿಳೆಯನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ.
ಕೃತ್ಯ ಎಸಗಿದವರು ಯಾರು? ಕೊಲೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296