ತುಮಕೂರು: ಚಾಕುವಿನಿಂದ ಚುಚ್ಚಿ ಯುವಕನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿ ನಡೆದಿದೆ.
ರಿಹಾನ್ ಪಾಷ (20) ಕೊಲೆಯಾದ ಯುವಕನಾಗಿದ್ದಾನೆ. ಮನೆಯಲ್ಲಿ ಊಟ ಮಾಡುತ್ತಿದ್ದವನ್ನ ಕರೆಸಿ ಬರ್ಬರವಾಗಿ ಚಾಕುವಿನಿಂದ ಚುಚ್ಚಿದ ಕೊಲೆ ಮಾಡಿದ್ದಾರೆ.
ಹುಡುಗಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದ್ದು, ಮಾತಾಡಬೇಕು ಬಾ ಎಂದು ಕರೆಸಿ ಹೊಟ್ಟೆಭಾಗಕ್ಕೆ ಇರಿದಿರುವ ಪಾತಕಿಗಳು. ತೀವ್ರ ರಕ್ತಸ್ರಾವದಿಂದ ಯುವಕ ಕುಸಿದು ಬಿದ್ದನು. ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ.
ಮರಳೂರು ದಿಣ್ಣೆಯಲ್ಲಿ ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿವೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q