ಬೆಂಗಳೂರು : ದೇವರ ಜೀವನಹಳ್ಳಿ (ಡಿ. ಜೆ. ಹಳ್ಳಿ) ಠಾಣೆ ವ್ಯಾಪ್ತಿಯಲ್ಲಿ ಸಯ್ಯದ್ ಸುಹೇಲ್ ಅಲಿಯಾಸ್ ಪಪ್ಪಾಯಿಯನ್ನು (18) ದುಷ್ಕರ್ಮಿಗಳು ಕೊಲೆ ಮಾಡಿ, ಪರಾರಿಯಾಗಿದ್ದಾರೆ.
ಅಪರಾಧ ಹಿನ್ನೆಲೆಯುಳ್ಳ ಸುಹೇಲ್, ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ಹೆಸರು ರೌಡಿಪಟ್ಟಿಯಲ್ಲಿತ್ತು. ಜನ್ಮದಿನವಾಗಿದ್ದ ಗುರುವಾರವೇ (ಸೆ. 28) ಈತನ ಕೊಲೆಯಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ಹಳೇ ವೈಷಮ್ಯದಿಂದಾಗಿ ಪರಿಚಯಸ್ಥರೇ ಕೃತ್ಯ ಎಸಗಿರುವ ಮಾಹಿತಿ ಇದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ.


