ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಕೊಲೆ ಮಾಡಲಾಗಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ BSNL ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ ನಿರ್ದೇಶಕ ನೇಮಕ ಹಿನ್ನೆಲೆ ಪಾರ್ಟಿ ಕೊಡುವುದಾಗಿ ಜಮೀನಿಗೆ ಕರೆಸಿ ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ಕೊಲೆಗೂ ಮುನ್ನ ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆಗೈಯಲಾಗಿದೆ. ಸಾಗನೂರ ಗ್ರಾಮದ ಸಚಿನ್ & ಗ್ಯಾಂಗ್ ನಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಗಾಣಗಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


