ಬೆಂಗಳೂರು: ಬೆಂಗಳೂರು ಕರಗ ಮೆರವಣಿಗೆಯ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವಕ ಡಿ.ಸಾರದಿ ಕೊಲೆಯಾದ ಯುವಕನಾಗಿದ್ದಾನೆ.
ಏ.24ರಂದು ಮುಂಜಾನೆ 3.30ರ ಸುಮಾರಿಗೆ ಅಣ್ಣಮ್ಮ ದೇಗುಲದ ಮುಂದೆಯೇ ಯುವಕನನ್ನು ಕೊಲೆ ಮಾಡಲಾಗಿದೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ಒಬ್ಬ ವ್ಯಕ್ತಿ ಸಾರದಿ ಮತ್ತು ಸ್ನೇಹಿತರನ್ನು ಟಚ್ ಮಾಡಿದ್ದಾನೆ. ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಮೂರ್ನಾಲ್ಕು ಹುಡುಗರಿಂದ ಸಾರದಿ ಮೇಲೆ ಮಾರಣಾಂತಿಕವಾಗಿ ಹಲ್ಲೆಯಾಗಿದೆ.
ತಕ್ಷಣವೇ ಸಾರದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾರದಿ ಮೃತಪಟ್ಟಿದ್ದಾನೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


