ಪ್ರೀತಿಸಿ ಮದುವೆಯಾಗಿದ್ದರಿಂದ ಆಕ್ರೋಶಗೊಂಡ ಮನೆಯವರು 24 ವರ್ಷ ವಯಸ್ಸಿನ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಸುಟ್ಟು ಭಸ್ಮ ಮಾಡಿರುವ ಘಟನೆ ರಾಜಸ್ಥಾನದ ಝಲವರ್ ನಲ್ಲಿ ನಡೆದಿದೆ.
ರವಿ ಭೀಲ್ ಎಂಬ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ಯುವತಿ, ಕುಟುಂಬಸ್ಥರನ್ನು ಎದುರಿಸಿ ಮನೆಯಿಂದ ಓಡಿಹೋಗಿ ಮದುವೆಯಾಗಿದ್ದರು. ಇಬ್ಬರೂ ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ವಾಸ ಮಾಡುತ್ತಿದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಅಲ್ಲಿಗೆ ಹೋಗಿ ಇಬ್ಬರನ್ನೂ ಅಪರಿಸಿಕೊಂಡು ಬಂದಿದ್ದಾರೆ.
ಅನಂತರ ವರನ ಎದುರೇ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅನಂತರ ಆಕೆಯ ದೇಹವನ್ನು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಮಹಿಳೆ ಪತಿ ದೂರು ನೀಡಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA