ದೊಡ್ಡಬಳ್ಳಾಪುರ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿಯಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ನಡುರಸ್ತೆಯಲ್ಲಿ ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ ನಿಂದ ಹೇಮಂತ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಮೃತ ಹೇಮಂತ್ ಮೇಲೆ 10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಮೃತದೇಹ ಎಸೆದು ಎಸ್ಕೇಪ್ ಆಗಿದ್ದಾರೆ. ಸ್ಥಳೀಯರು ವಾಕಿಂಗ್ ಮಾಡುವಾಗ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296