ಬೆಳಗಾವಿ: 9 ತಿಂಗಳ ತುಂಬು ಗರ್ಭಿಣಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಸುವರ್ಣ ಮಾಂತಯ್ಯ ಮಠಪತಿ (35) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮನೆಗೆ ನುಗ್ಗಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.ಮಹಿಳೆಗೆ ಈಗಾಗಲೇ ನಾಲ್ವರು ಹೆಣ್ಣು ಮಕ್ಕಳಿದ್ದು, ಐದನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನೊಂದು ವಾರದಲ್ಲಿ ಈಕೆ ಐದನೇ ಮಗುವಿಗೆ ಜನ್ಮ ನೀಡಬೇಕಿತ್ತು.
ಮುಂದಿನ ಒಂದು ವಾರದಲ್ಲಿ ಹೆರಿಗೆಗೆ ದಿನಾಂಕವನ್ನು ವೈದ್ಯರು ನಿಗದಿ ಮಾಡಿದ್ದರು.
ಮಹಿಳೆಯ ಪತಿ ಶನಿವಾರ ಮಧ್ಯಾಹ್ನ ಹಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಮಕ್ಕಳು ಕೂಡ ಶಾಲೆಗೆ ಹೋಗಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಮಯದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಮನಬಂದಂತೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ತಕ್ಷಣವೇ ಪಕ್ಕದ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ಮಹಿಳೆಯನ್ನು ದಾಖಲಿಸಲಾಯಿತು. ಆದರೆ, ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx