ನವದೆಹಲಿ : ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಎನ್‌ವಿ ರಮಣ ಅವರು ನಿವೃತ್ತಿ ಹೊಂದಿದ್ದ ಕರಣ ಇವರನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಲಲಿತ್ ಅವರು ಆಗಸ್ಟ್ 27 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, 27 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ನ್ಯಾಯಮೂರ್ತಿ ಲಲಿತ್ ಅವರು ಕೇವಲ ಮೂರು ತಿಂಗಳಿಗಿಂತ ಕಡಿಮೆ ಅವಧಿಗೆ ಸಿಜೆಐ ಆಗಿ ಕಾರ್ಯನಿರ್ವಹಿಸಿಸಲಿದ್ದಾರೆ. ನವೆಂಬರ್ 8 ರಂದು ಅವರು 65 ನೇ ವರ್ಷಕ್ಕೆ ಕಾಲಿಡಲಿದ್ದಾರೆ, ಹೀಗಾಗಿ ನಿವೃತ್ತಿಹೊಂದಲಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy