ಧಾರವಾಡ: ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಅವರು, ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ.
ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು.
ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4