nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    • ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ
    • ‘ಗ್ರಂಥ’ ಚಿತ್ರಕ್ಕೆ ಮುಹೂರ್ತ, ಭೂಗತಲೋಕದ ಕುರಿತಾದ 90ರ ಕಾಲಘಟ್ಟದ ಚಿತ್ರ
    • ಸಂಪಾದಕೀಯ: ತೆರಿಗೆ ಹೊರೆಗಿಂತ ಅರಿವಿನ ಕೊರತೆಯೇ ಹೆಚ್ಚು ಅಪಾಯಕಾರಿ
    • ನವರಾತ್ರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ
    ತುಮಕೂರು December 2, 2024

    ಬಸವನಗೌಡ ಪಾಟೀಲ್ ಯತ್ನಾಳರ ಅಜ್ಞಾನ ಪ್ರದರ್ಶನ: ಡಾ.ಡಿ.ಎನ್.ಯೋಗೀಶ್ವರಪ್ಪ

    By adminDecember 2, 2024No Comments2 Mins Read
    basavanna

    ಹನ್ನೆರಡನೇ ಶತಮಾನದ ದಾರ್ಶನಿಕ ಬಸವಣ್ಣನವರ ಅಂತ್ಯದ ಬಗ್ಗೆ ಇನ್ನೂ ಖಚಿತವಾದ ಸಂಶೋಧನೆಗಳು ನಡೆಯದೇ ಇರುವ ಸಂದರ್ಭದಲ್ಲಿ ಶಾಸಕರಾದ ಯತ್ನಾಳರು ಬಸವಣ್ಣ ಹೊಳೆಗೆ ಹಾರಿ ಬಿದ್ದು ಸತ್ತುಹೋದ ಎಂದು ಹೇಳಿರುವುದು ಅವರ ಅಜ್ಞಾನದ ಪರಮಾವಧಿ. ಈ ಮೂಲಕ ಅವರು ಬಸವಾನುಯಾಯಿಗಳ ಭಾವನೆಗಳಿಗೆ ಧಕ್ಕೆ ತಂದಿರುವುದೇ ಅಲ್ಲದೆ ಲಿಂಗಾಯಿತರನ್ನು ಅವಮಾನಿಸುವ ಮೂಲಕ ವೈದಿಕರನ್ನು ಮೆಚ್ಚಿಸಲು ಹೊರಟಿದ್ದಾರೆ ಎಂದು ಸಂಶೋಧಕ ಡಾ. ಡಿ.ಎನ್.ಯೋಗೀಶ್ವರಪ್ಪ ಹೇಳಿದರು.

    ಅವರು ಬಸವಕೇಂದ್ರ, ಜಯದೇವ ವಿದ್ಯಾರ್ಥಿ ನಿಲಯಟ್ರಸ್ಟ್ ಮತ್ತು ಜಾಗತಿಕ ಲಿಂಗಾಯತ ಮಹಾಸಭಾದವರು ಮುರುಘರಾಜೇಂದ್ರ ಸಭಾಂಗಣದಲ್ಲಿ ಏರ್ಪಡಿಸಿದ್ದ ಶರಣಸಂಗಮ ಮತ್ತು ವಿಜಯಕುಮಾರ ಕಮ್ಮಾರ್ ಅವರ ಶರಣ ಸಿದ್ಧಾಂತಗಳು ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

    ಸಾಮಾಜಿಕ ಕಳಕಳಿ ಇದ್ದ ಬಸವಣ್ಣ ದುರ್ಬಲ ಮನಸ್ಸಿನವರಾಗಿದ್ದರೆ ಅವರು ಅಂದು ಅಧಿಕಾರದ ಉನ್ನತ ಅಧಿಕಾರದಲ್ಲಿದ್ದರು ಇಡೀ ರಾಜಪ್ರಭುತ್ವವನ್ನು ಎದುರು ಹಾಕಿಕೊಂಡು ಸಾಮಾನ್ಯ ಜನರ ಪರವಾಗಿ ಹೋರಾಟ ಮಾಡುತ್ತಿರಲಿಲ್ಲ. ಅವರ ಉದ್ದೇಶ ಸಮಸಮಾಜ ನಿರ್ಮಾಣ ಮಾಡುವುದು, ಸಮಪಾಲು, ಸಮಬಾಳು ಎಂಬುದೇ ಬಸವಣ್ಣನ ಘೋಷಮಂತ್ರವಾಗಿತ್ತು ಎಂದರು.

    ಉಪನ್ಯಾಸ ನೀಡಿದ ಸಾಹಿತಿಗಳಾದ ಡಾ. ಬಿ.ಸಿ.ಶೈಲಾನಾಗರಾಜ್ ಅವರು ಕುಲಮೂಲ ಕಾಯಕ ಜೀವಿಗಳನ್ನು ಒಂದೆಡೆ ಸಂಘಟಿಸಿದ ಬಸವಣ್ಣ ಅವರ ಕಾಯಕಕ್ಕೆ ದೈವದ ಸ್ಪರ್ಶವನ್ನು ನೀಡಿ ದಲಿತ ಮತ್ತು ಹಿಂದುಳಿದ ವರ್ಗಗಳ ಸಾಮಾಜಿಕ ಸಮುದಾಯಗಳಿಗೆ ಆತ್ಮವಿಶ್ವಾಸವನ್ನು ತುಂಬಲು ಪ್ರಯತ್ನಿಸಿದ ಐತಿಹಾಸಿಕ ಮಹಾಪುರುಷ ಎಂದು ಬಣ್ಣಿಸಿದರು.

    ವಚನಗಳು ಆತ್ಮಸಾಕ್ಷಿಯ ನುಡಿಗಳು ಆಗಿದ್ದು ಕೆಲವೇ ಸಮುದಾಯಕ್ಕೆ ಮೀಸಲಾಗಿದ್ದ ಅಕ್ಷರ ಜ್ಞಾನವನ್ನು ಎಲ್ಲ ಸಮುದಾಯಗಳಿಗೆ ವಿಸ್ತರಿಸಿ ಅವರನ್ನೂ ಅಕ್ಷರವಂತರನ್ನಾಗಿ ಮಾಡಿದ ಬಸವಣ್ಣ ಸಾಕ್ಷರತಾ ಆಂದೋಲನದ ಜನಕನಾಗಿದ್ದಾನೆ. ಕುಲಕಸುಬನ್ನು ಮಾಡುತ್ತಿದ್ದ ಜನಾಂಗದ ಅನೇಕ ಶರಣರು ವಚನಗಳನ್ನು ರಚಿಸಿದ್ದು ಸುಮಾರು ಇಪ್ಪತ್ತೈದು ಸಾವಿರ ವಚನಗಳು ಲಭ್ಯವಿದೆ. 770 ವಚನಕಾರರಲ್ಲಿ 33 ವಚನಕಾರ್ತಿಯರೂ ಇರುವುದು ಬಸವಣ್ಣನವರ ಚಳುವಳಿಯ ಫಲಶ್ರುತಿಯಾಗಿದೆ ಎಂದರು.

    ಕೃತಿಯ ಲೇಖಕರಾದ ವಿಜಯಕುಮಾರ ಕಮ್ಮಾರ್ ಅವರು ಮಾತನಾಡಿ ದೇಹವನ್ನೇ ದೇವಾಲಯವಾಗಿ ರೂಪಿಸಿದ ಬಸವಣ್ಣ ಪ್ರತಿಯೊಬ್ಬರಿಗೂ ಇಷ್ಟಲಿಂಗಧಾರಣೆ ಮಾಡುವ ಮೂಲಕ ಶಿವಸಂಸ್ಕೃತಿಯ ನೇತಾರನೆನಿಸಿಕೊಂಡಿದ್ದಾನೆ. ಇಷ್ಟಲಿಂಗವೆಂಬುದು ಸಮಾನತೆಯ ಸಂಕೇತವಾಗಿದ್ದು ಅದರ ಮೂಲಕ ದೇವರನ್ನು ಸಂಪರ್ಕಿಸಬಹುದು ಎಂದು ಅಭಿಪ್ರಾಯಪಟ್ಟರು.

    ವೇದಿಕೆಯಲ್ಲಿ ಕೈಗಾರಿಕೋದ್ಯಮಿ ಡಿ.ವಿ.ಶಿವಾನಂದ್ ಹಾಜರಿದ್ದರು. ಸಿದ್ದಗಂಗಮ್ಮ ಬಿ. ಸಿದ್ಧರಾಮಣ್ಣ ಅಧ್ಯಕ್ಷತೆ ವಹಿಸಿದ್ದರು. ರಾಜೇಶ್ವರಿ ಶಿವಾನಂದ್ ಪ್ರಾರ್ಥಿಸಿದರು. ಜಾಗತಿಕ ಲಿಂಗಾಯತ ಮಹಾಸಭಾದ ನಾಗಭೂಷಣ್ ಸ್ವಾಗತಿಸಿದರು. ತಾಲ್ಲೂಕು ಕ.ಸಾ.ಪ. ಅಧ್ಯಕ್ಷ ಚಿಕ್ಕಬೆಳ್ಳಾವಿ ಶಿವಕುಮಾರ್ ವಂದಿಸಿದರು. ಬಸವಕೇಂದ್ರದ ಕಾರ್ಯದರ್ಶಿ ಚಂದ್ರಶೇಖರ್ ನಿರೂಪಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    Comments are closed.

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ತುಮಕೂರು: ನಗರದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ವೃತ್ತವನ್ನು ತುಮಕೂರು ಸ್ಕ್ವೇರ್ ಆಗಿ ಅಭಿವೃದ್ಧಿ ಪಡಿಸಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ…

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.