nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026
    Facebook Twitter Instagram
    ಟ್ರೆಂಡಿಂಗ್
    • ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’
    • ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ
    • ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ
    • ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್
    • ತಿಪಟೂರು: ಲಯನ್ಸ್ ಕ್ಲಬ್ ನ 8ನೇ ಉಚಿತ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಯಶಸ್ವಿ
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ: ಬಸವರಾಜ ಬೊಮ್ಮಾಯಿ
    ರಾಜ್ಯ ಸುದ್ದಿ November 17, 2023

    ಸಿಎಂ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಬಸವಣ್ಣ ಪ್ರೇರಣೆ: ಬಸವರಾಜ ಬೊಮ್ಮಾಯಿ

    By adminNovember 17, 2023No Comments2 Mins Read
    basavaraja bommayi

    ಬೆಂಗಳೂರು: ಮನುಷ್ಯನ ಎಲ್ಲ ಪ್ರಶ್ನೆಗಳಿಗೂ ವಚನದಲ್ಲಿ ಉತ್ತರ ಇದೆ. ಕಳಬೇಡ ಕೊಲಬೇಡ ಎನ್ನುವುದು ನಮ್ಮ ಧ್ಯೇಯವಾಗಬೇಕು. ಅದನ್ನು ಪಾಲಿಸಿದರೆ ಮನುಷ್ಯ ಸಂತೋಷ ಮತ್ತು ಸಮಾಧಾನದಿಂದ ಸರಳ ಜೀವನ ನಡೆಸಬಹುದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

    ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹದಿನೆಂಟನೇ ವರ್ಷದ ರಮಣಶ್ರೀ ಶರಣ ಪ್ರಶಸ್ತಿ ಪ್ರದಾನ ಹಾಗೂ ಎಸ್.ಷಡಕ್ಷರಿ ಅವರ “ಕ್ಷಣ ಹೊತ್ತು ಅಣಿಮುತ್ತು” ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ಶರಣ ಸಾಹಿತ್ಯ ವಚನದ ರೂಪದಲ್ಲಿ ಬರದೇ ಇದ್ದರೆ ಕನ್ನಡ ಸಾಹಿತ್ಯ ಎಷ್ಟು ಬಡವಾಗುತ್ತಿತ್ತು ಎಂದು ಎಲ್ಲರೂ ಯೋಚನೆ ಮಾಡಬೇಕಿದೆ. ಮಾತಿಗೆ ಅರ್ಥ ಬರಬೇಕಾದರೆ ನಡೆ ನುಡಿ ಬಹಳ ಮುಖ್ಯ, ಜ್ಞಾನ, ವಿಜ್ಞಾನ ತಂತ್ರಜ್ಞಾನ ಎಲ್ಲವೂ ಇದೆ. ಅದರಲ್ಲಿ ನಮ್ಮ ತನದ ಭಾವ ಮೂಡಬೇಕಿರುವುದು ಮುಖ್ಯವಾಗಿದೆ. ವಚನಗಳು ಶುದ್ದ ಕನ್ನಡದಲ್ಲಿ ಶರಣರು ಕರ್ನಾಟಕಕ್ಕೆ  ಕೊಟ್ಟಿರುವ ಶಾಸ್ವತ ಕೊಡುಗೆಯಾಗಿದೆ ಎಂದು ಹೇಳಿದರು.

    ಇವನಾರವ ಇವನಾರವ ಎನ್ನುವ ಬದಲು ಇವನಮ್ಮವ ಎನ್ನುವ ವಚನದಲ್ಲಿ ಸಮಾನತೆ ಅಡಗಿದೆ. ದಯವೇ ಧರ್ಮದ ಮೂಲವಯ್ಯ ಎನ್ನುವ ವಚನದಲ್ಲಿ ಧರ್ಮದ ಸಾರ ಅಡಗಿದೆ. ಬಸವಣ್ಣನವರು ತಾವಷ್ಟೇ ವಚನ ಸಾಹಿತ್ಯ ನೀಡದೇ ಎಲ್ಲ ಸಮುದಾಯಗಳ ಅನುಭವಗಳನ್ನು ವಚನಗಳ ಮೂಲಕ ತರುವ ಪ್ರಯತ್ನ ಮಾಡಿದ್ದಾರೆ. ಬಸವಣ್ಣನವರು ದೇವರು ಮತ್ತು ಮನುಷ್ಯರ ನಡುವೆ ಮಧ್ಯವರ್ತಿಗಳನ್ನು ತೆಗೆದು ಹಾಕಿದ್ದಾರೆ. ಇದು ಬಹಳ ಚಿಂತನೆ ಮಾಡುವ ವಿಚಾರ.  ನಾನು ಮತ್ತು ನನ್ನ ಆತ್ಮಸಾಕ್ಷಿಯ ನಡುವೆ ಯಾರೂ ಬೇಕಾಗಿಲ್ಲ ಅಂತ ಹೇಳಿದ್ದಾರೆ ಎಂದರು.

    ಕ್ಷಣ ಹೊತ್ತು ಅಣಿ ಮುತ್ತು ಕೃತಿಕಾರ ಷಡಕ್ಷರಿಯವರು ಎಂದೂ ಕೂಡ ಅಸಮಾಧಾನಗೊಂಡಿಲ್ಲ. ಅವರು ಯಾವಾಗಲೂ ಸಮಾಧಾನದಿಂದ ಎಲ್ಲರೊಂದಿಗೆ ಬೆರೆಯುವ ಗುಣ ಅನುಕರಣೀಯ ಎಂದರು.

    ಸಿದ್ದರಾಮಯ್ಯ ಅವರ ನಡೆ ಭಿನ್ನ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದಕ್ಕೆ ಮೂಲ ಪ್ರೇರಣೆ ಬಸವಣ್ಣ ಮತ್ತು ವಚನ ಸಾಹಿತ್ಯ. ಅವರು  ಬಸವಣ್ಣನವರ ತತ್ವಗಳನ್ನು ನಂಬಿದವನು ಎಂದು ಬಲವಾಗಿ ಹೇಳುತ್ತಾರೆ. ಹೀಗಾಗಿ ಅವರ ಕೆಲಸಗಳು ಮತ್ತು ನಡೆ ಎಲ್ಲರಿಗಿಂತ ಬಿನ್ನವಾಗಿ ಕಾಣುತ್ತದೆ. ಸಮಾಜದ ತುಳಿತಕ್ಕೊಳಗಾದವರ ಸಮಾನತೆಗಾಗಿ ನಿರಂತರವಾಗಿ ಕೆಲಸ ಮಾಡುವುದೇ ಒಬ್ಬ ನಿಜವಾದ ನಾಯಕನ ಜವಾಬ್ದಾರಿ. ರಾಜಕಾರಣಿಯ ಕಣ್ಣು ಮುಂದಿನ ಚುನಾವಣೆಯ ಮೇಲೆ ಇದ್ದರೆ, ಒಬ್ಬ ಸ್ಟೇಟ್ಸ್ ಮನ್ ಕಣ್ಣು ಮುಂದಿನ ಜನಾಂಗದ‌ ಮೇಲೆ ಇದೆ. ನಾವು ವಿರೋಧ ಪಕ್ಷದಲ್ಲಿ ಇದ್ದರೂ ಕೂಡ ಸಿದ್ದರಾಮಯ್ಯ ಅವರ ಈ ವಿಚಾರಧಾರೆಯನ್ನು ನಾವು ಮೊದಲಿನಿಂದಲೂ ನೋಡಿಕೊಂಡು ಬಂದಿದ್ದೇವೆ. ಅವರ ನಡೆ ನುಡಿ ಎಲ್ಲರಿಗೂ ಅರ್ಥವಾಗಿದೆ. ಅವರಿಂದ ಶರಣ ಸಾಹಿತ್ಯ ಪ್ರಶಸ್ತಿ ನೀಡಿರುವುದು ಅತ್ಯಂತ ಸೂಕ್ತವಾಗಿದೆ. ಇದರಿಂದ ಅವರಲ್ಲಿ ಇನ್ನಷ್ಟು ಬಸವ ತತ್ವ ವಿಚಾರಗಳು ಗಟ್ಟಿಯಾಗುತ್ತವೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಚಿವ ವಿ.‌ಸೋಮಣ್ಣ, ಕೃತಿಕಾರ ಷಡಕ್ಷರಿ ಸೇರಿದಂತೆ ಗಣ್ಯರು ಹಾಜರಿದ್ದರು.


    Provided by
    Provided by
    admin
    • Website

    Related Posts

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ವಾಸ್ತವ ವರದಿ ಪರಿಶೀಲನೆ ಬಳಿಕವೇ ಬರ ಘೋಷಣೆ ಮತ್ತು ಪರಿಹಾರ ವಿತರಣೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    July 7, 2026

    ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ

    July 7, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸ್ಕೀಮ್ ನೌಕರರ ಬೃಹತ್ ಪ್ರತಿಭಟನೆ: ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತೆಗೆ ಆಗ್ರಹಿಸಿ ‘ಕರಾಳ ದಿನಾಚರಣೆ’

    July 10, 2026

    ಬೆಂಗಳೂರು: ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಹಾಗೂ ಕೆಲಸದ ಒತ್ತಡ ಇಳಿಸಲು ಒತ್ತಾಯಿಸಿ ಲಕ್ಷಾಂತರ ಅಂಗನವಾಡಿ (ಐಸಿಡಿಎಸ್) ಮತ್ತು ಬಿಸಿಯೂಟ…

    ಸ್ವಚ್ಛ ಪರಿಸರಕ್ಕಾಗಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ: ಔರಾದ್ ತಾಲೂಕಿನ ಹೊಕ್ರಾಣಾದಲ್ಲಿ ಜಾಗೃತಿ ಜಾಥಾ

    July 10, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    ಮಕ್ಕಳಲ್ಲಿ ಶಿಕ್ಷಣದ ಪ್ರೀತಿ ಹುಟ್ಟಿಸುವ ಕಲಿಕೆ ಬದುಕಿನ ಆದ್ಯತೆಯಾಗಲಿ: ವೇಣುಗೋಪಾಲ್

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.