ತಿಪಟೂರು: ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಚನ್ನಬಸವಯ್ಯ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ,ತಹಶೀಲ್ದಾರ್ ಚಂದ್ರಶೇಖರ್ ಘೋಷಣೆ ಮಾಡಿದರು.
ಸಹಾಯಕ ಚುನಾವಣಾಧಿಕಾರಿ ಅರುಣ್ ಕುಮಾರಿ ಹಾಜರಿದ್ದರು. ಕೆಎಂಎಫ್ ನಿರ್ದೇಶಕ ಮಾದೀಹಳ್ಳಿ ಪ್ರಕಾಶ್, ಟಿಎಪಿಸಿಎಂ ಎಸ್ ಅಧ್ಯಕ್ಷ ಶಂಕರಮೂರ್ತಿ, ನಿಕಟಪೂರ್ವ ಅಧ್ಯಕ್ಷ ಚಿನ್ನಸ್ವಾಮಿ, ಮಾಜಿ ಅಧ್ಯಕ್ಷ ಮಾಧುಸ್ವಾಮಿ, ತಾ.ಪಂ. ಮಾಜಿ ಅಧ್ಯಕ್ಷ ವೆಂಕಟೇಶ್ ಮತ್ತು ಸದಸ್ಯ ತಿಮ್ಮರಾಜು ಸೇರಿದಂತೆ ಗ್ರಾ.ಪಂ. ಸದಸ್ಯರು, ಕಾಂಗ್ರೆಸ್ ಮುಖಂಡರುಗಳು ಹಾಗೂ ಸ್ನೇಹಿತರು ಹಾಜರಿದ್ದು ಅಭಿನಂದನೆ ಸಲ್ಲಿಸಿದರು.
ವರದಿ: ಆನಂದ್ ತಿಪಟೂರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5