ಬೆಂಗಳೂರು : ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವಿಜಯಪುರ ಏರ್ ಪೋರ್ಟ್ ಗೆ ಬಸವೇಶ್ವರರ ಹೆಸರಿಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕಾಯ್ದೆಗೆ ಅನುಮೋದನೆ ನೀಡಿದ ಬಳಿಕ, ಬೆಳಗಾವಿಯಲ್ಲಿ ನಡೆಯಲಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಸರ್ಕಾರ ಮಂಡಿಸಲಿದೆ ಎನ್ನಲಾಗಿದೆ. ಈ ಬಳಿಕ ಅಧಿಕೃತವಾಗಿ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಆದೇಶ ಹೊರ ಬೀಳಲಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


