ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದಲ್ಲಿ ರಾಜ್ಯ ಬಜೆಟ್‌ನಲ್ಲಿ ಮಹಾಲಿಂಗಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಅಲ್ಲದೆ ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿ ಹೆಸರಿನಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಫೋಟೊ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಈ ಪೋಟೊ ಕೆಳಗೆ ಜನನ 2008, ಮರಣ 2023 ಎಂದು ನಮೂದಿಸಲಾಗಿದೆ. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ನಡೆದಿರುವ ಹೋರಾಟವು ಶುಕ್ರವಾರ 310 ದಿನಗಳನ್ನು ಪೂರೈಸಿದೆ. ಇನ್ನೂ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಮಹಾಲಿಂಗಪುರ ತಾಲೂಕು ಘೋಷಣೆ ಆಗುತ್ತದೆ ಎಂದು ನಿರೀಕ್ಷಿಸಲಾಗಿತ್ತು.
ಆದರೆ, ಈ ನಿರೀಕ್ಷೆಗಳು ಸುಳ್ಳಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹೋರಾಟ ಸಮಿತಿ ಹಾಗೂ ಸಾರ್ವಜನಿಕರು ಚೆನ್ನಮ್ಮ ಸರ್ಕಲ್ ನಲ್ಲಿ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟನೆಗಿಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


