nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ.ಬಿ.ಪಾಟೀಲ
    ರಾಜ್ಯ ಸುದ್ದಿ January 15, 2025

    ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ: 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ.ಬಿ.ಪಾಟೀಲ

    By adminJanuary 15, 2025No Comments2 Mins Read
    m b patil

    ದೇವನಹಳ್ಳಿ: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ–ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು.

    ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಈ ಉತ್ಪಾದನಾ ಘಟಕಕ್ಕೆ ಕಂಪನಿಯು ಮೊದಲ ಹಂತದಲ್ಲಿ 390 ಕೋಟಿ ರೂ. ಹೂಡಿಕೆ ಮಾಡಲಿದ್ದು, 300 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇಲ್ಲಿ ಉತ್ಪಾದಿಸಲಾಗುವ ಬ್ಯಾಟರಿಗಳ ಪೈಕಿ ಶೇಕಡ 20ರಷ್ಟನ್ನು ಅಮೆರಿಕ ಮತ್ತು ಯೂರೋಪಿನ ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದಿದ್ದಾರೆ.

    ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಐಬಿಸಿ ಘಟಕಕ್ಕೆ 10 ಎಕರೆ ಜಾಗ ಕೊಟ್ಟಿದ್ದು, ಫಾಕ್ಸ್–ಕಾನ್ ಸಂಸ್ಥೆಯ ಸಮೀಪದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಮುಂದಿನ ಒಂಬತ್ತು ತಿಂಗಳಲ್ಲಿ ಈ ಘಟಕವು ಕಾರ್ಯಾಚರಣೆ ಆರಂಭಿಸಲಿದ್ದು, ಇಲ್ಲೇ ಬ್ಯಾಟರಿಗಳನ್ನು ತಯಾರಿಸಿ, ಇಲ್ಲಿಂದಲೇ ದೇಶ-ವಿದೇಶಗಳಿಗೂ ಕಳಿಸಿ ಕೊಡಲಿದೆ ಎಂದು ಅವರು ಮಾಹಿತಿ ನೀಡಿದರು.

    ಸದ್ಯಕ್ಕೆ ಐಬಿಸಿ ಕಂಪನಿಯು ದಕ್ಷಿಣ ಕೊರಿಯಾದಲ್ಲಿ ಸೆಲ್ಸ್ ಉತ್ಪಾದಿಸಿ, ಅವುಗಳನ್ನು ಇಲ್ಲಿಗೆ ತಂದು ಪೂರ್ಣ ಪ್ರಮಾಣದ ಬ್ಯಾಟರಿಗಳನ್ನು ತಯಾರಿಸುತ್ತಿದೆ. ಈ ಘಟಕ ಕಾರ್ಯಾರಂಭ ಆದ ನಂತರ ಇಲ್ಲೇ ಸೆಲ್ ಗಳ ಉತ್ಪಾದನೆ ಕೂಡ ಆಗಲಿದೆ. ಇದು ದೇಶದಲ್ಲೇ ಮೊದಲ ಸೆಲ್ ಉತ್ಪಾದನಾ ಘಟಕವಾಗಲಿದೆ. ಮುಂಬರುವ ದಿನಗಳಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳ ಜತೆಗೆ ಉಳಿದ ವಾಹನಗಳಿಗೂ ಇದು ಬ್ಯಾಟರಿ ಪೂರೈಸಲಿದೆ ಎಂದು ಅವರು ವಿವರಿಸಿದರು.

    ಭಾರತದಲ್ಲಿ ಶಿಕ್ಷಣ ಹಾಗೂ ಅಮೆರಿಕದ ಸಿಲಿಕಾನ್ ವ್ಯಾಲಿಯಲ್ಲಿ ತರಬೇತಿ ಪಡೆದ ಯುವ ಉದ್ಯಮಿಗಳು ಐಬಿಸಿ ಕಂಪನಿ ಸ್ಥಾಪಿಸಿ, ಬ್ಯಾಟರಿಗಳ ವಿನ್ಯಾಸ, ಉತ್ಪಾದನೆಗೆ ಆದ್ಯತೆ ಕೊಟ್ಟಿದ್ದಾರೆ. ಹಾಗೆಯೇ ಭಾರತದ ಅಗತ್ಯಕ್ಕೆ ಹೊಂದುವ ಹಾಗೆ ವಿನ್ಯಾಸ ಮಾಡಿರುವುದು ಮೆಚ್ಚುವಂತಹದ್ದು ಎಂದು ಸಚಿವರು ಶ್ಲಾಘಿಸಿದರು

    ಇದು ಭಾರತದಲ್ಲಿ ಇಂತಹ ಪ್ರಪ್ರಥಮ ಯೋಜನೆಯಾಗಿದೆ. ಇಲ್ಲಿ ರೆಟ್ರೋಫಿಟ್ ಬ್ಯಾಟರಿಗಳನ್ನು ಕೂಡ ತಯಾರಿಸಲಾಗುವುದು. ಇದರಿಂದ ರಾಜ್ಯದ ಆರ್ಥಿಕತೆಗೆ ಹೊಸ ಬಲ ಬರಲಿದ್ದು, ಚೀನಾದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ ಎಂದು ಅವರು ವಿವರಿಸಿದ್ದಾರೆ.

    ನಾವು ಸುಸ್ಥಿರ, ತಂತ್ರಜ್ಞಾನಾಧಾರಿತ ಮತ್ತು ಎಲ್ಲರನ್ನೂ ಒಳಗೊಳ್ಳುವಂತಹ ಆರ್ಥಿಕತೆಯನ್ನು ಕಟ್ಟುವ ಗುರಿ ಇಟ್ಟುಕೊಂಡಿದ್ದೇವೆ. ಇನ್ನೊಂದೆಡೆಯಲ್ಲಿ, ಹಸಿರು ಇಂಧನ ಬಳಕೆಗೆ ಉತ್ತೇಜನ ಕೊಡುತ್ತಿದ್ದೇವೆ. ಐಬಿಸಿ ಗಿಗಾ ಫ್ಯಾಕ್ಟರಿಯು ಈ ಪರಿವರ್ತನೆಯ ಮೈಲುಗಲ್ಲಾಗಿದೆ. ಇದರಿಂದಾಗಿ ರಾಜ್ಯವು ಇಂಧನ ಕ್ಷೇತ್ರದ ಸಂಶೋಧನೆಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಐಬಿಸಿ ಸಿಇಒ ಪ್ರಿಯದರ್ಶಿ ಪಾಂಡಾ, ಸಿಎಸ್ ಒ ಸುಂದರ್ ರಾಮಮೂರ್ತಿ, ಕುನಾಲ್ ಜೈನ್, ಜಾಸ್ ಟೆಕ್ ಅಧ್ಯಕ್ಷ ಜೇಸನ್ ಚುಂಗ್, ಉಪಾಧ್ಯಕ್ಷ ಡ್ಯಾನಿ ಚುಂಗ್, ಮಹಾನಗರ್ ಗ್ಯಾಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಆಶು ಸಿಂಘಾಲ್, ಡೆಪ್ಯುಟಿ ಎಂಡಿ ಸಂಜಯ್ ಶೇಂದೆ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.