ಹೆಚ್.ಡಿ.ಕೋಟೆ: ಕೇರಳದಲ್ಲಿ ಓಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್‍ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್.ಡಿ. ಕೋಟೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಬಾವಲಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಕೇರಳದಲ್ಲಿ 13 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‍ಪೋಸ್ಟ್ ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತಿದೆ. ವಾಹನದಲ್ಲಿ ಓಡಾಡುವವರ ಹೆಸರು ನೋಂದಾಯಿಸಿಕೊಂಡು ಜಿಲ್ಲಾ ಸರ್ವೇಕ್ಷಣಾಕಾರಿಗಳ ಕಚೇರಿಗೆ ವರದಿ ನೀಡಲಾಗಿದೆ ಎಂದರು.ಕೋವಿಡ್ ವರದಿಯನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಹೊಸ ವರ್ಷದ ಸಂಭ್ರಮಾಚರಣೆಗಾಗಿ ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಪ್ರಯಾಣಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy