ಶಿವಮೊಗ್ಗ: ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ರಾಜ್ಯಾಧ್ಯಕ್ಷರು ಮತ್ತು ಚುನಾವಣೆ ಸಮಿತಿಇರುತ್ತದೆ ಯಾರು ಪಕ್ಷದಿಂದ ಸ್ಪರ್ಧಿಸಬೇಕೆಂದು ಅವರೇ ನಿರ್ಧರಿಸುತ್ತಾರೆ. ಆದರೆ ಅನಿತಾ ಕುಮಾರಸ್ವಾಮಿಯವರ ಮಗ ನಿಖಿಲ್ ಅಭ್ಯರ್ಥಿಯೆಂದು ಘೋಷಣೆ, ಭವಾನಿ ರೇವಣ್ಣ ನಾನೇ ಅಭ್ಯರ್ಥಿಯೆಂದು ಘೋಷಣೆ, ಸಿದ್ದು ಕೋಲಾರಕ್ಕೆ ನಾನೇ ಅಭ್ಯರ್ಥಿ ಘೋಷಣೆ ಎಂದು ಹೇಳಿಕೊಳ್ಳೂತ್ತಿದ್ದಾರೆ. ಅವರಿಗೆ ಪಕ್ಷ, ಚುನಾವಣೆ ಸಮಿತಿ ಇಲ್ಲವೇ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪ್ರಜಾಪ್ರಭುತ್ವ ಅಂತ ಮಾತನಾಡುವ ವ್ಯಕ್ತಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಪಕ್ಷ ನೋಡಿದರೆ ಗೊತ್ತಾಗುತ್ತದೆ ಎಂದರು.
ರಮೇಶ್ ಜಾರಳಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಆಡಿಯೋ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಇಲ್ಲಿಯವರೆಗೆ ಡಿ.ಕೆ. ಶಿವಕುಮಾರ್ ಯಾವುದೇ ಉತ್ತರ ಕೊಟ್ಟಿಲ್ಲ. ತಲೆಹರಟೆ ಮಾತು ಏನೇನೋ ಹೇಳುತ್ತಿದ್ದಾರೆ. ಆ ಆಡಿಯೋ ಕುರಿತು ಉತ್ತರ ಏನು? ಆಡಿಯೋದಲ್ಲಿ ಡಿ.ಕೆ. ಶಿವಕುಮಾರ್ ಅವರು 40 ಮತ್ತು 50 ಕೋಟಿ ಕುರಿತು ಅವರೇ ಒಪ್ಪಿಕೊಂಡಿದ್ದಾರೆ. ಅದು ಅವರ ವೈಯಕ್ತಿಕ ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


