ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ 2047ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸುವ ಅಜೆಂಡಾದೊಂದಿಗೆ ‘ಕಿಲ್ಲರ್ ಸ್ಕ್ವಾಡ್’ ಎಂಬ ರಹಸ್ಯ ಗುಂಪುಗಳನ್ನು ರಚಿಸಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಪತ್ತೆ ಮಾಡಿದೆ.
ಕರ್ನಾಟಕದಲ್ಲಿ ಬಿಜೆಪಿ ಯುವಮೋರ್ಚಾ ಜಿಲ್ಲಾ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ನಲ್ಲಿ ಈ ವಿಷಯ ಬಹಿರಂಗವಾಗಿದೆ.
ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಜನರಲ್ಲಿ ಭಯವನ್ನು ಹರಡಲು ಮಾಡಲಾಗಿದೆ ಎಂದು ಎನ್ಐಎ ಚಾರ್ಜ್ ಶೀಟ್ ಹೇಳುತ್ತದೆ. ಸಮಾಜದಲ್ಲಿ ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿಯನ್ನು ಸೃಷ್ಟಿಸಲು ಮತ್ತು 2047 ರ ವೇಳೆಗೆ ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಪಿಎಫ್‌ಐ ತನ್ನ ಕಾರ್ಯಸೂಚಿಯ ಭಾಗವಾಗಿ ಹತ್ಯೆಗಳನ್ನು ನಡೆಸಲು ‘ಸೇವಾ ತಂಡಗಳು’ ಅಥವಾ ‘ಕಿಲ್ಲರ್ ಸ್ಕ್ವಾಡ್’ಗಳನ್ನು ರಚಿಸಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.
ನಿರ್ದಿಷ್ಟ ಸಮುದಾಯಕ್ಕೆ ಸೇರಿದ ‘ಶತ್ರುಗಳನ್ನು’ ಗುರುತಿಸಲು, ಟ್ರ್ಯಾಕ್ ಮಾಡಲು ಮತ್ತು ಕೊಲ್ಲಲು ಕಿಲ್ಲರ್ ಸ್ಕ್ವಾಡ್‌ಗಳು ಶಸ್ತ್ರಸಜ್ಜಿತವಾಗಿವೆ ಮತ್ತು ತರಬೇತಿ ಪಡೆದಿವೆ. ಹಿರಿಯ ಪಿಎಫ್‌ಐ ಮುಖಂಡರ ಸೂಚನೆ ಮೇರೆಗೆ ಈ ತಂಡ ಕಾರ್ಯನಿರ್ವಹಿಸುತ್ತಿತ್ತು
. ಬೆಂಗಳೂರು ನಗರ ಮತ್ತು ಬಳ್ಳಾರಿಯ ಸುಳ್ಯ ಟೌನ್‌ನಲ್ಲಿ ಪಿಎಫ್‌ಐ ಮುಖಂಡರ ಸಭೆ ಸೇರಿ ಈ ಸಂಚು ರೂಪಿಸಲಾಗಿದೆ. ಜಿಲ್ಲಾ ಸೇವಾ ತಂಡದ ಮುಖ್ಯಸ್ಥ ಮುಸ್ತಫಾ ಪೀಚರ್ ಅವರು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರನ್ನು ಪತ್ತೆ ಮಾಡಿ ಕೊಲ್ಲುವಂತೆ ತಮ್ಮ ತಂಡಕ್ಕೆ ನಿರ್ದೇಶನ ನೀಡಿದರು.
ಗುರುತಿಸಿರುವ ನಾಲ್ವರಲ್ಲಿ ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೂಡ ಸೇರಿರುವುದು ಪತ್ತೆಯಾಗಿದೆ. ಚಾರ್ಜ್ ಶೀಟ್ ಪ್ರಕಾರ ಪ್ರವೀಣ್ ನೆಟ್ಟಾರು ಹತ್ಯೆಯೂ ಇದೇ ಸಂಚಿನ ಭಾಗವಾಗಿತ್ತು. ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಎನ್‌ಐಎ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ 20 ಮಂದಿಯ ಹೆಸರಿದೆ ಎಂದು ತಿಳಿದುಬಂದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


