ಬೆಂಗಳೂರು: ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ.
ಹೈಕೋರ್ಟ್ ಎಸಿಬಿ ರದ್ದುಗೊಳಿಸಿದ ಬಳಿಕ ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿತ್ತು. ಈ ಹಿನ್ನಲೆಯಲ್ಲಿಯೇ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಎಸಿಬಿ ರದ್ದುಗೊಳಿಸಿ, ಈ ಬೆನ್ನಲ್ಲೇ ಲೋಕಾಯುಕ್ತ ಕಾರ್ಯಾಚರಣೆ ಚುರುಕುಗೊಂಡಿದೆ. ಬೆಂಗಳೂರಿನ ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿ ಮೇಲೆ ದಾಳಿ ನಡೆಸಿತ್ತು.
ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವಂತ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು 8 ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನು ನಡೆಸಲಾಗಿತ್ತು.
ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಶ್ರೀನಿವಾಸ್ ವಿರುದ್ಧ ಖಾತೆ ಬದಲಾವಣೆ ಸಂಬಂಧ ದೂರು ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿಯೇ ಲೋಕಾಯುಕ್ತ ಡಿವೈಎಸ್ಪಿ ಮಂಜಯ್ಯ, ಶಂಕರ್ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


