ರಾಮ ನವಮಿಯ ಆಚರಣೆಯ ಕಾರಣದಿಂದ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ. ರಾಮನವಮಿನಯ ಕಾರಣ ಮಾಂಸ ಮಾರಾಣ, ಪ್ರಾಣಿ ಹತ್ಯೆಯನ್ನು ನಿಷೇಧ ಮಾಡಲಾಗಿದ್ದು, ಈ ಕುರಿತು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಆದೇಶ ಹೊರಡಿಸಿದೆ.
ಚೈತ್ರ ನವರಾತ್ರಿ ರಾಮ ನವಮಿಯೊಂದಿಗೆ ಕೊನೆಗೊಳ್ಳುವ ಕಾರಣ ರಾಮನವಮಿಯಂದು ಶ್ರೀರಾಮನ ವಿಶೇಷ ಪೂಜೆ ಮಾಡಲಾಗುವುದು.
ನವಮಿ ತಿಥಿ ಎಪ್ರಿಲ್ 17 ರಂದು ಮಧ್ಯಾಹ್ನ 3.15 ಕ್ಕೆ ಕೊನೆಗೊಳ್ಳುತ್ತದೆ. ಧಾರ್ಮಿಕ ನಂಬಿಕೆಯ ಅನುಸಾರ, ವಿಷ್ಣು ತನ್ನ ಏಳನೇ ಅವತಾರವಾಗಿ ರಾಮನಾಗಿ ಜನಿಸಿದ್ದು, ಅಯೋಧ್ಯೆಯ ರಾಜ ದಶರಥನ ಹಿರಿಯ ಮಗನಾಗಿ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಜನಿಸಿರುವುದಾಗಿ ಹೇಳಿಕೆ ಇದೆ. ಈ ಕಾರಣದಿಂದ ಪ್ರತಿ ವರ್ಷ ರಾಮನವಮಿ ಹಬ್ಬವನ್ನು ಭಗವಾನ್ ರಾಮನ ಜನ್ಮದಿನವನ್ನಾಗಿ ಆಚರಿಸಲಾಗುವುದು.
ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರತಿ ಬಾರಿಯೂ ಬಿಬಿಎಂಪಿ ಈ ಕ್ರಮ ಕೈಗೊಳ್ಳುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


