nammatumakuru

    Subscribe to Updates

    Get the latest creative news from FooBar about art, design and business.

    What's Hot

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026
    Facebook Twitter Instagram
    ಟ್ರೆಂಡಿಂಗ್
    • ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”
    • ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್
    • ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ
    • ತುಮಕೂರು: ಸ್ಮಶಾನ ಭೂಮಿ ಪರಭಾರೆ ಆರೋಪ: ಬೃಹತ್ ಪ್ರತಿಭಟನೆ
    • ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಪೃಶ್ಯತೆ ಆಚರಣೆ ವಿರೋಧಿಸಿ ಛಲವಾದಿ ಮಹಾಸಭಾ ಪ್ರತಿಭಟನೆ
    • ಡೈರಿ ಕಟ್ಟಡದ ಪಿಲ್ಲರ್ ಕುಸಿದು ಬಿದ್ದು 10 ವರ್ಷದ ಶಾಲಾ ಬಾಲಕ ಸ್ಥಳದಲ್ಲೇ ಸಾವು!
    • ಮಾಜಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನಿಧನ: 67 ವರ್ಷದ ಬಿ.ಸಿ.ನಾಗೇಶ್ ಅವರಿಗೆ ಏನಾಗಿತ್ತು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಭೇಟಿ ನೀಡಿದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿನಾಥ್
    ರಾಜ್ಯ ಸುದ್ದಿ June 14, 2024

    ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಭೇಟಿ ನೀಡಿದ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ ಗಿರಿನಾಥ್

    By adminJune 14, 2024No Comments2 Mins Read
    bengaluru

    ಬೆಂಗಳೂರು: ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ನಿಗಮದ(ಕೆಪಿಸಿಎಲ್) ವತಿಯಿಂದ ಬಿಡದಿಯಲ್ಲಿ ಸ್ಥಾಪಿಸುತ್ತಿರುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಶೀಘ್ರ ಪರೀಕ್ಷಾರ್ಥವಾಗಿ ವಿದ್ಯುತ್ ಉತ್ಪಾದಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದಲ್ಲಿ ಕಸದ ಸಮಸ್ಯೆ ನಿವಾರಣೆ ಮಾಡುವ ಸಂಬಂಧ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕರ್ನಾಟಕ ವಿದ್ಯುತ್ ನಿಗಮದ ವತಿಯಿಂದ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲಾಗುತ್ತಿದ್ದು, ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆಯನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ತ್ಯಾಜ್ಯವನ್ನು ಸರಿಯಾಗಿ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನಂತರ ವಿದ್ಯುತ್ ಉತ್ಪಾದನೆಗಾಗಿ ಪರೀಕ್ಷಾರ್ಥವಾಗಿ ತ್ಯಾಜ್ಯದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.

    11.5 ಮೆಗಾವಾಟ್ ವಿದ್ಯುತ್ ಉತ್ಪಾದನೆ: ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು 10 ಎಕರೆಯಲ್ಲಿ ಸ್ಥಾಪಿಸಲಾಗಿದ್ದು, ಒಟ್ಟು 260 ಕೋಟಿ ರೂ. ವೆಚ್ಚದಲ್ಲಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಿಸಲಾಗಿದೆ. ಪ್ರತಿನಿತ್ಯ 11.5 ಮೆಗಾವಾಟ್ ಸಾಮರ್ಥ್ಯದ ವಿದ್ಯುತ್ ಉತ್ಪಾದಿಸುವ ಸಾಮರ್ಥ್ಯವಿದೆ.

    ಪಾಲಿಕೆಯಿಂದ ತ್ಯಾಜ್ಯದ ವ್ಯವಸ್ಥೆ: ಪಾಲಿಕೆಯ ಸಂಸ್ಕರಣಾ ಘಟಕಗಳು, ಒಣ ತ್ಯಾಜ್ಯ ಸಂಗ್ರಹಣಾ ಘಟಕಗಳಲ್ಲಿ ಸಂಗ್ರಹವಾಗುವ ಆರ್‌ಡಿಎಫ್ ಅನ್ನು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ರವಾನಿಸಲಾಗುತ್ತದೆ.

    ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಪರಿಶೀಲನೆ: ಬೊಮ್ಮನಹಳ್ಳಿ ವಲಯ ಗೊಲ್ಲಹಳ್ಳಿ ವ್ಯಾಪ್ತಿಯಲ್ಲಿ ಸರ್ವೇ ಸಂಖ್ಯೆ 39ರಲ್ಲಿ ಲೋಕೋಪಯೋಗಿ ಇಲಾಖೆ ಒಡೆತನದ ಸುಮಾರು 170 ಎಕರೆ ಜಾಗವಿದ್ದು, ಆ ಜಾಗದಲ್ಲಿ ಇಂಟಿಗ್ರೇಟೆಂಡ್ ಘನತ್ಯಾಜ್ಯ ನಿರ್ವಹಣೆಯ ವ್ಯವಸ್ಥೆಗಾಗಿ ಸ್ಥಳ ಬಳಸಿಕೊಳ್ಳುವ ಸಲುವಾಗಿ ಇಂದು ಸ್ಥಳ ಪರಿಶೀಲನೆ ನಡೆಸಲಾಯಿತು.

    ಲೋಕೋಪಯೋಗಿ ಇಲಾಖೆಯ ಜಾಗದಲ್ಲಿ ಸಮತಟ್ಟಾದ ಜಾಗ ಹಾಗೂ ಕ್ಯಾರಿ ಜಾಗ ಎಷ್ಟಿದೆ ಎಂಬುದನ್ನು ಪರಿಶೀಲಿಸಬೇಕು. ಜೊತೆಗೆ ಈ ಜಾಗವನ್ನು ಪಾಲಿಕೆಗೆ ಹಸ್ತಾಂತರ ಮಾಡಿಕೊಳ್ಳುವ ಸಂಬಂಧ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಕೂಡಲೆ ಪತ್ರ ಬರೆದು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

    ಈ ವೇಳೆ ಮುಖ್ಯ ಅಭಿಯಂತರರಾದ ಬಸವರಾಜ್ ಕಬಾಡೆ, ಲೋಕೇಶ್, ಕಾರ್ಯಪಾಲಕ ಅಭಿಯಂತರರಾದ ಮಧುಸುಧನ್, ಕೆಪಿಟಿಸಿಎಲ್ ಮುಖ್ಯ ಅಭಿಯಂತರರಾದ ಎಸ್.ಆರ್ ಕಬಾಡೆ, ಬಿಬಿಎಂಪಿ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಹನೂರು ಶೂಟೌಟ್ ಪ್ರಕರಣ: ಸಿಬ್ಬಂದಿ ಕಾರ್ಯಾಚರಣೆಯನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಂಡ ಸಚಿವ ರಾಮಲಿಂಗಾರೆಡ್ಡಿ!

    August 17, 2026

    ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದ ಜೆಡಿಎಸ್ ನಾಯಕನ ಬಂಧನ!

    August 17, 2026

    ಚಿತ್ರದುರ್ಗ: ಬಾವಿಯಲ್ಲಿ ನವವಿವಾಹಿತೆ ಶವ ಪತ್ತೆ – ಕೊಲೆ ಆರೋಪ

    August 17, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಈ ದಿನದ ಕಥೆಯ ಶೀರ್ಷಿಕೆ:   “ಆಗುವುದೆಲ್ಲಾ ಒಳ್ಳೆಯದಕ್ಕೇ !?”

    August 19, 2026

    ಬಹಳ ಹಿಂದೆ ಸರ್ವಸಿದ್ಧಕನೆಂಬ ವ್ಯಕ್ತಿ ಇದ್ದನು. ಈತನಿಗೆ ತನ್ನದೇ ನೆಲೆಯಾಗಲೀ, ಮಾತಾ ಪಿತೃಗಳಾಗಲೀ, ಬಂಧು ಬಾಂಧವರಾಗಲೀ ಯಾರೂ ಇರಲಿಲ್ಲ, ಸನ್ಯಾಸಿಯಂತೆ…

    ರುಡ್ ಸೆಟ್ ಸಂಸ್ಥೆ: ಉಚಿತ ತರಬೇತಿಗೆ ಅರ್ಜಿ ಆಹ್ವಾನ

    August 19, 2026

    ಮಕ್ಕಳ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಿ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್

    August 19, 2026

    ಮುಖ್ಯಮಂತ್ರಿ ಬಗ್ಗೆ ವೈಯಕ್ತಿಕ ನಿಂದನೆ ನಿಲ್ಲಿಸಿ: ಶಾಸಕರಿಗೆ ಕಾಂಗ್ರೆಸ್ ಮುಖಂಡರ ಆಗ್ರಹ

    August 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.