ಬಿಬಿಎಂಪಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದ್ದು ಈ ಮಧ್ಯೆ ಮತ್ತೆ 3 ತಿಂಗಳು ಕಾಲಾವಕಾಶ ಕೇಳಿದೆ.
ಈ ಸಂಬಂಧ ಹೈಕೋರ್ಟ್ ಗೆ ನಗರಾಭಿವೃದ್ಧಿ ಇಲಾಖೆ ಅರ್ಜಿ ಸಲ್ಲಿಸಿದ್ದು ಬಿಬಿಎಂಪಿ ಚುನಾವಣೆ ನಡೆಸಲು 3 ತಿಂಗಳು ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ.
ನ್ಯಾ. ಭಕ್ತವತ್ಸಲ ಸಮಿತಿಯಿಂದ ಮಾಹಿತಿ ಕೇಳಲಾಗಿದೆ. ಹಿಂದುಳಿದ ವರ್ಗಕ್ಕೆ ಮೀಸಲಾತಿ ಸಂಬಂಧ, ರಾಜಕೀಯ ಹಿಂದುಳಿದಿರುವಿಕೆ ಬಗ್ಗೆಯೋ ಮಾಹಿತಿ ಕೇಳಲಾಗಿದೆ . ಮಾಹಿತಿ ನೀಡಲು ಭಕ್ತ ವತ್ಸಲ ಸಮಿತಿ ಕಾಲಾವಕಾಶ ಕೇಳಿದೆ. ಹೀಗಾಗಿ 3 ತಿಂಗಳು ಸಮಯ ನೀಡುವಂತೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮನವಿ ಮಾಡಿದೆ ಎನ್ನಲಾಗಿದೆ. ನವೆಂಬರ್ 30ರೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಲು ಹೈಕೋರ್ಟ್ ಆದೇಶಿಸಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


