ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯಲಿದೆ. 243 ವಾರ್ಡಗಳಿಗೂ ಚುನಾವಣೆ ಮಾಡುತ್ತೇವೆ. ನಾವು ರಾಜಕಾರಣ ಮಾಡುವುದಿಲ್ಲ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬಸವನಗುಡಿ, ಬುಲ್ ಟೆಂಪಲ್ ರಸ್ತೆಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಬಿಬಿಎಂಪಿ ಚುನಾವಣೆ ಆಗಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮೇಯರ್ ಇಟ್ಟುಕೊಂಡೇ ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು. ಚುನಾವಣೆ ಬೇಗ ಆಗಬೇಕೆಂದು ನಮ್ಮ ಪಕ್ಷದವರೇ ಕೇಸ್ ಹಾಕಿದ್ದು, ಬಿಜೆಪಿಯವರು ಡಿಲಿಮಿಟೇಷನ್ ಮನಸೋಇಚ್ಛೆ ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದೇವೆ. ವಾರ್ಡ್ ವಿಂಗಡಣೆ ವಿಚಾರ ಅಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದೇವೆ.
ನಾವು ಇದಕ್ಕೆ ಕೈ ಹಾಕುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ನಾವು ಈ ಹಿಂದೆ ಅಧಿಕಾರದಲ್ಲಿ ಇದ್ದಾಗ ಪ್ರಾದೇಶಿಕ ವಿಂಗಡಣೆ ಮಾಡಿದ್ವಿ ಯಾರು ಸಹ ಕೋರ್ಟ್ ಗೆ ಹೋಗಿರಲಿಲ್ಲ. ಈಗ ಬಿಜೆಪಿ ಅವರು ರಾಜಕೀಯವಾಗಿ ವಾರ್ಡ್ ಪುನರ್ ವಿಂಗಡನೆ ಮಾಡಿದ್ರು. ಹಾಗಾಗಿ ಇವಾಗ ಹೊಸದಾಗಿ ವಾರ್ಡ್ ಪುನರ್ ವಿಂಗಡನೆ ಮಾಡಲು ತಿಳಿಸಲಾಗಿದೆ.
ಬಿಬಿಎಂಪಿ ಹೊಸ ಆ್ಯಕ್ಟ್ ಪ್ರಕಾರ 243 ವಾರ್ಡ್ ಗಳಿಗೆ ಚುನಾವಣೆ ಮಾಡುತ್ತೇವೆ. ಎಲ್ಲ ಕಾಲದಲ್ಲೂ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿದ್ದೇವೆ. ಈ ಬಾರಿಯೂ ನಾವು ಚುನಾವಣೆ ಮಾಡುತ್ತೇವೆ. ಬಿಬಿಎಂಪಿ ಎಲೆಕ್ಷನ್ ಗೂ ನಿವೃತ ಐಎಎಸ್ ಅಧಿಕಾರಿ ಬಿ ಎಸ್ ಪಾಟೀಲ್ ಕಮಿಟಿಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದರು. ಬಡವರ ಬಗ್ಗೆ ಕಾಳಜಿ ಇಲ್ಲ: ಬಿಜೆಪಿ ಸರ್ಕಾರಕ್ಕೆ ಕಾಳಜಿ ಇದ್ದರೆ ಅಕ್ಕಿ ಕೊಡೋರು. ಅವರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ.
ಬಿಜೆಪಿಯವರಿಗೆ ಅದಾನಿ, ಅಂಬಾನಿ ಬಗ್ಗೆ ಹೆಚ್ಚು ಕಾಳಜಿ ಇದೆ. ಅವರಿಗೆ ಸಾಲ ಮನ್ನಾ ಮಾಡಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ರಾಜಕಾರಣ ಮಾಡುತ್ತಾರೆ. ಬಿಜೆಪಿ ನಾಯಕರು ಶ್ರೀಮಂತರ ಪರವಾಗಿದ್ದಾರೆ. ಬಿಜೆಪಿ ನಾಯಕರು ಈ ಅಕ್ಕಿ ತಿನ್ನುತ್ತಾರಾ?. ಬಡವರ ಬಗ್ಗೆ ಕಾಳಜಿ ಇಲ್ಲ. ಎಂದು ರಾಮಲಿಂಗಾರೆಡ್ಡಿ ಹರಿಹಾಯ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


