ಬಿಬಿಎಂಪಿ(BBMP) ಖಾರ್ಯವೈಖರಿ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೊರೊನಾ 1, 2 ಮತ್ತು 3ನೇ ಅಲೆಯ ವೇಳೆ ಸೋಂಕಿತರ ಚಿಕಿತ್ಸೆ ನೀಡಲು ಆಯುಷ್ ಮತ್ತು ದಂತ ವೈದ್ಯರನ್ನು ನೇಮಕ ಮಾಡಿಕೊಂಡಿದ್ದ ಬಿಬಿಎಂಪಿ ಇದೀಗ ನಮಗೆ ನಿಮ್ಮ ಅಗತ್ಯವಿಲ್ಲವೆಂದು ಹೇಳಿದೆ.
ಇದನ್ನು ಪ್ರಶ್ನಿಸಿ ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್ ಮಾಡಿದ್ದು, ಬಿಬಿಎಂಪಿ ಅಧಿಕಾರಿಗಳನ್ನು(BBMP Officers) ತರಾಟೆಗೆ ತೆಗೆದುಕೊಂಡಿದ್ದಾರೆ.‘ಆಗತ್ಯ ಇದ್ದಾಗ ಕೆಲಸ ಮಾಡಿಸಿಕೊಂಡು, ಅಗತ್ಯ ಇಲ್ಲದಿದ್ದಾಗ ಮನೆಗೆ ಹೋಗಿ ಎನ್ನುವುದು ಯಾವ ನ್ಯಾಯ? ಕೋವಿಡ್(COVID-19) 1, 2 ಮತ್ತು 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಯುಷ್, ದಂತ ವೈದ್ಯರನ್ನು ಬಿಬಿಎಂಪಿ(BBMP) ನೇಮಕ ಮಾಡಿಕೊಂಡಿತ್ತು’ ಎಂದು ಟ್ವೀಟ್ ಮಾಡಿದ್ದಾರೆ.
‘2 ವರ್ಷ ರಾಜ್ಯಕ್ಕೆ ಕಷ್ಟವಿದ್ದಾಗ ಇವರ ಸೇವೆ ಪಡೆದು, ಈಗ ಎಕಾಏಕಿ ಬೇಡ ಎನ್ನುವುದು ಸರಿಯಲ್ಲ. ಆದಷ್ಟು ಇವರ ಸೇವೆಯನ್ನು ಮುಂದುವರೆಸಬೇಕು ಹಾಗೂ ಬಿಬಿಎಂಪಿ(BBMP) ವತಿಯಿಂದ ಬೆಂಗಳೂರಿನ ಎಲ್ಲಾ ವಾರ್ಡುಗಳಲ್ಲಿ ತೆರೆಯಲಿರುವ ನಮ್ಮ ಕ್ಲಿನಿಕ್ ಗಳಿಗೆ ಆದರೂ ಇವರ ಸೇವೆಯನ್ನು ಪಡೆದುಕೊಳ್ಳಬೇಕು’ ಅಂತಾ ಒತ್ತಾಯಿಸಿದ್ದಾರೆ.
ಉತ್ಸಾಹಿ ತರುಣರಾದ ಇವರೆಲ್ಲರೂ ಜನರಿಗೆ ಉತ್ತಮ ಆರೋಗ್ಯ ಸೇವೆ(Health Service)ನೀಡುವುದರಲ್ಲಿ ಸಂಶಯವಿಲ್ಲ. 2 ವರ್ಷಗಳ ತುರ್ತು ಸಂದರ್ಭದಲ್ಲಿ ಕೆಲಸ ಮಾಡಿದ ಅನುಭವ ಕೂಡ ಇವರಿಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಇವರಿಗೆ ಅನುಕೂಲ ಮಾಡಿಕೊಡಬೇಕು’ ಎಂದು ಎಚ್ ಡಿಕೆ ಆಗ್ರಹಿಸಿದ್ದಾರೆ.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5