ಬೆಂಗಳೂರು: ಗಣೇಶ ಮೂರ್ತಿ ವಿಸರ್ಜನೆ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಸಭೆ ನಡೆಯಿತು. ಬಿಬಿಎಂಪಿ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್ ಬ್ಯಾನರ್ ಮತ್ತು ಪ್ಲಾಸ್ಟಿಕ್ ಬಳಕೆ ಮಾಡಬಾರದು. ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಮತ್ತಿತರ ಕಡೆಗಳಲ್ಲಿ ನಿಮಜ್ಜನಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ


