1 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಿಬಿಎಂಪಿ ಕಂದಾಯ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಇಬ್ಬರನ್ನು ಬಂಧಿಸಲಾಗಿದ್ದು, ಒಬ್ಬ ವ್ಯಕ್ತಿ ಪರಾರಿಯಾಗಿದ್ದಾರೆ. ಬಿಬಿಎಂಪಿ ವಾರ್ಡ್ ನಂ. 166 ರ ರೆವೆನ್ಯೂ ಇನ್ಸ್ ಪೆಕ್ಟರ್ ರಾಜಗೋಪಾಲ್ ಪರಾರಿಯಾಗಿದ್ದು, ಎಫ್ ಡಿ ಎ ರಾಘವೇಂದ್ರ, ಡಾಟಾ ಎಂಟ್ರಿ ಆಪರೇಟರ್ ಸುರೇಶ್ ದತ್ತಾರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಖಾತೆ ಬದಲಾವಣೆ ಮಾಡಿಕೊಡಲು ಮಾಚೋಹಳ್ಳಿಯ ಅರುಣ್ ಎಂಬಾತನಿಂದ 1 ಲಕ್ಷದ 25 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 1 ಲಕ್ಷ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕೇಸ್ ದಾಖಲಿಸಿ ಬಂಧನ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


